ಹಾವೇರಿ

ಅಭಿವೃದ್ಧಿ ಕಾರ್ಯ ಬೊಮ್ಮಾಯಿ ಗೆಲವಿಗೆ ಶ್ರೀರಕ್ಷೆ

Published On :

ಶಿಗ್ಗಾಂವಿ: ಸವಣೂರು ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಅವರ ಪತ್ನಿ ಚನ್ನಮ್ಮ ಬೊಮ್ಮಾಯಿ ಅವರು ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನ, ಜಯನಗರ, ಹಳೆಪೇಟೆ ಇನ್ನಿತರ ಕಡೆ ನೂರಾರು ಮಹಿಳೆಯರೊಂದಿಗೆ ಪಾದಯಾತ್ರೆ ಮೂಲಕ ಮತ ಯಾಚಿಸಿದರು.
ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ಮನೆ-ಮನೆಗೆ ತೆರಳಿ ಮತ ಯಾಚಿಸಿದ ಚನ್ನಮ್ಮ ಬೊಮ್ಮಾಯಿ, ಪತಿ ಸಚಿವ ಬಸವರಾಜ ಬೊಮ್ಮಾಯಿ 5 ವರ್ಷದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ನೆನಪಿಸಿಕೊಡುವ ಮೂಲಕ ಮತ ಯಾಚಿಸಿದರು.
ಐವತ್ತು ವರ್ಷ ಆಗದ ಕೆಲಸಗಳನ್ನು ಐದು ವರ್ಷದಲ್ಲಿ ಮಾಡಿರುವ ಮಹಿಳೆಯರಿಗೆ ಸ್ವ-ಸಹಾಯ ಸಂಘದವರಿಗೆ ಜೀವನ ವಿಮೆ ಮಾಡಿರುವುದು, ಇನ್ನೂ ಅನೇಕ ಅಭಿವೃದ್ಧಿ ಕಾರ್ಯಗಳೇ ನನ್ನ ಪತಿ ಬಸವರಾಜ ಬೊಮ್ಮಾಯಿ ಗೆಲುವಿಗೆ ಶ್ರೀ ರಕ್ಷೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಚನ್ನಮ್ಮ ಬೊಮ್ಮಾಯಿ, ಸಾಮಾಜಿಕ ನ್ಯಾಯದಡಿ ರಾಜಕಾರಣ ಮೈಗೂಡಿಸಿಕೊಂಡಿರುವ ಪತಿ ಬಸವರಾಜ ಬೊಮ್ಮಾಯಿ ಜನಸಾಮಾನ್ಯರಲ್ಲಿ ಒಂದಾಗಿ ಬದುಕಿದವರು ಎಂದರು.
ಸ್ತ್ರೀಶಕ್ತಿ ಸ್ವಸಹಾಯ ಸಂಘದ ಅಧ್ಯಕ್ಷೆ ಸುಶೀಲಕ್ಕ ಪಾಟೀಲ, ಮಂಗಳಾ ಹೆಸರೂರ, ಶ್ಯಾಮಲಾ ಭ್ರಮ್ಮಾವರ, ವಿಜಯಕ್ಕ ಹೆಸರೂರ, ಉಷಾ ಪಾಟೀಲ, ಭಾರತಿ ರಾಮಾಪುರಮಠ, ಜಯಶ್ರೀ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.