ಹಾವೇರಿ

ಮತದಾನ ಜಾಗೃತಿಗೆ ಮ್ಯಾರಥಾನ್

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಮೇ 2
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಗುರುವಾರ ನಗರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಮೇಶ ಕುಸುಗಲ್ಲ ನಗರದ ಹುಕ್ಕೇರಿಮಠದ ಹತ್ತಿರ ಮ್ಯಾರಥಾನ್ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೇ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮ್ಯಾರಥಾನ್ ಸಹ ಒಂದಾಗಿದೆ ಎಂದು ಹೇಳಿದರು.
ನಗರದ  ಹುಕ್ಕೇರಿಮಠದಿಂದ ಆರಂಭವಾದ ಮ್ಯಾರಥಾನ್ ಗಾಂಧಿ ವೃತ್ತ, ಕೋರ್ಟ್ ರಸ್ತೆ, ಜೆ.ಪಿ. ವೃತ್ತ, ಹೈಸ್ಕೂಲ್ ರಸ್ತೆ, ಜೆ.ಎಚ್. ಪಟೇಲ್ ವೃತ್ತದ ಮೂಲಕ ಸಂಚರಿಸಿ, ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು. ಮಾರ್ಗದುದ್ದಕ್ಕೂ ಮತದಾನದ ಮಹತ್ವ ಕುರಿತು ಜಿಲ್ಲಾ ಸ್ವೀಪ್ ಸಮಿತಿ ಪ್ರಕಟಿಸಿದ ಪೋಸ್ಟರ್ ಮತ್ತು ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಿ, ಅರಿವು ಮೂಡಿಸಲಾಯಿತು.
ಮ್ಯಾರಥಾನ್ನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಅನುಷ್ಠಾನದ ಮೇಲ್ವಿಚಾರಣೆಗೆ ನೇಮಕಗೊಂಡಿರುವ ವೀಕ್ಷಕರಾದ ಗಂಗಪ್ಪ ಹಾಗೂ ಸಹ ವೀಕ್ಷಕರಾದ ನದೀಮ್ ತೂಫೈಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಚನ್ನಮ್ಮ ಹೊಳಿಹೊಸೂರ, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿಯಾದ ಜಿಲ್ಲಾ ವಾರ್ತ್ತಾಧಿಕಾರಿ ಸಿ.ಪಿ. ಮಾಯಾಚಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಿ.ಎಚ್. ಲಲಿತಾ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೆ. ಮುತ್ತುಕಾಮಾಚ್ಚಿ, ಸಿಂದಗಿ ಶಾಂತವೀರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಶಿವಾನಂದ ಕೆಂಬಾವಿ ಉಪಸ್ಥಿತರಿದ್ದರು.
ಜಿಲ್ಲಾ ಯುವಜನ ಸೇವಾ ಇಲಾಖೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು, ಶಿಕ್ಷಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ, ಸ್ವಸಹಾಯ ಸಂಘಗಳ ಮಹಿಳಾ ಕಾರ್ಯಕರ್ತರು, ಸಿಂಧಗಿ ಶಾಂತವೀರ ಆಯುವೇದ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಮ್ಯಾರಥಾನ್ನಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.