ಶಿವರಾಜ ಸಜ್ಜನರ ಪರ ಪತ್ನಿ ಹೇಮಾ ಪ್ರಚಾರ
ಬ್ಯಾಡಗಿ: ಕೆಜೆಪಿಗೆ ಮತ ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದಾದ ಅವಮಾನಕ್ಕೆ ತಕ್ಕ ಉತ್ತರ ನೀಡುವಂತೆ ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪತ್ನಿ ಹೇಮಾ ಕರೆ ನೀಡಿದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮತಕ್ಷೇತ್ರದ ನೆಲ್ಲಿಕೊಪ್ಪ ಗ್ರಾಮದಲ್ಲಿ ತಮ್ಮ ಪತಿ ಸಿವರಾಜ ಸಜ್ಜನರ ಪರ ಪ್ರಚಾರ ನಡೆಸಿದ ಅವರು, ಅಭಿವೃದ್ಧಿ ಹರಿಕಾರ ಬಿಎಸ್ವೈ ಬಿಜೆಪಿ ಮುಖಂಡರ ಸ್ವಾರ್ಥದಿಂದ ಜೈಲು ಸೇರುವಂತಾಯಿತು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದಲೂ ಕೆಳಗಿಳಿಸಲಾಯಿತು. ರಾಜ್ಯದ ಅಭಿವೃದ್ಧಿ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ಕೆಜೆಪಿ ಸ್ಥಾಪಿಸಿದ್ದು, ಶಿವರಾಜ ಸಜ್ಜನರಗೆ ಮತ ನೀಡುವ ಮೂಲಕ ಬಿಎಸ್ವೈ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಮಹಿಳೆಯರು ಆತ್ಮ ಗೌರವದಿಂದ ಬದುಕು ಸಾಗಿಸಲು, ಸಾಮಾಜಿಕ ನ್ಯಾಯ ದೊರಕಿಸಲು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಸ್ವ-ಸಹಾಯ ಸಂಘಗಳಿಗೆ ಸಹಾಯಧನ, ಭಾಗ್ಯಲಕ್ಷ್ಮೀ ಬಾಂಡ್, ಬಾಲಕಿಯರಿಗೆ ಉಚಿತ ಸೈಕಲ್ ನೀಡಿದ ಬಿಎಸ್ವೈ ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದರು.
ಗೆಲುವು ಖಚಿತ: ಸುಮಾರು 20 ವರ್ಷಗಳ ರಾಜಕೀಯ ಜೀವನದಲ್ಲಿ ಸೋಲಿಲ್ಲದ ಸರದಾರರಾಗಿರುವ ಶಿವರಾಜ ಸಜ್ಜನರ ಈ ಹಿಂದೆ ನಡೆದ 7 ಚುನಾವಣೆಗಳಲ್ಲಿ ಜಯ ಸಾಧಿಸಿದ್ದು, ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಕ್ಷೇತ್ರದ ಮತದಾರರು ಈ ಬಾರಿಯೂ ಸಜ್ಜನರ ಗೆಲುವಿಗೆ ಸಹಕರಿಸಲಿದ್ದು, 15 ಸಾವಿರ ಮತಗಳಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರೋಹಿಣಿ ಹುಣಸೀಮರದ, ಸುಧಾ ಕಳ್ಳಿಹಾಳ, ರತ್ನಮ್ಮ ಬೂದಿಹಾಳಮಠ, ಚೇತನಾ ಮೂಡ್ವಿ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಬಿ.ಸಿ. ಪಾಟೀಲ ರೋಡ್ ಶೋ
ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಮೇ 3
ತಾಲೂಕಿನ ಕೋಡ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಸಿ. ಪಾಟೀಲ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಬಿ.ಸಿ. ಪಾಟೀಲ ಮಾತನಾಡಿ, ನಾನು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ನನ್ನ ಗೆಲುವಿಗೆ ಕಾರಣ ಆಗಲಿವೆ. 5 ವರ್ಷಗಳ ಬಿಜೆಪಿ ಸರ್ಕಾರದ ವ್ಯಾಪಕ ಭ್ರಷ್ಟಾಚಾರ, ದುರಾಡಳಿತದಿಂದ ಬೇಸತ್ತ ಜನತೆ ಕಾಂಗ್ರೆಸ್ ಪರ ವಾಲಿದ್ದಾರೆ. ತಾಲೂಕಿನಲ್ಲಿ ನನಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಬ್ಲಾಕ್ ಅಧ್ಯಕ್ಷರಾದ ಜಿ. ಶಿವನಗೌಡ, ಎಸ್.ಕೆ. ಕರಿಯಣ್ಣನವರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ರವಿಶಂಕರ ಬಾಳಿಕಾಯಿ, ಎನ್.ಜಿ. ಬಣಕಾರ, ವನಜಾ ಪಾಟೀಲ, ಡಿ.ಸಿ. ಪಾಟೀಲ, ಎಸ್.ಬಿ. ತಿಪ್ಪಣ್ಣನವರ, ಸೃಷ್ಟಿ ಪಾಟೀಲ, ಈರಪ್ಪ ಗೊಣಿಮಠ, ಮರಿಗೊಣಪ್ಪ ದೂಳ್ಳಣ್ಣನವರ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

