ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ
ಹಾವೇರಿ: ಬ್ಯಾಡಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ, ವಸತಿ ಶಾಲೆ ಹಾಗೂ ಆಶ್ರಮ ಶಾಲೆಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಹ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಮೇ 25ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಡಗಿ, ಕಾಗಿನೆಲೆ, ಮಾಸಣಗಿ, ಹಿರೇಅಣಜಿ, ಬಿಸಲಹಳ್ಳಿ, ಕಲ್ಲೇದವರು, ಮೋಟೆಬೆನ್ನೂರು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬಿಸಲಹಳ್ಳಿ ಸರ್ಕಾರಿ ಪರಿಶಿಷ್ಟ ಪಂಗಡದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಬ್ಯಾಡಗಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5ರಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಬ್ಯಾಡಗಿಯ ಸರ್ಕಾರಿ ಸಾರ್ವಜನಿಕ ವಸತಿ ಶಾಲೆ, ತುಮರಿಕೊಪ್ಪದ ಸರ್ಕಾರಿ ಪರಿಶಿಷ್ಟ ಪಂಗಡದ ಆಶ್ರಮ ಶಾಲೆಗಳಿಗೆ 1ರಿಂದ 5ನೇ ತರಗತಿ ಮಕ್ಕಳು ಪ್ರವೇಶ ಪಡೆಯಬಹುದು. ಶಿಡೇನೂರಿನ ಶ್ರೀ ಮಣ್ಣಬಸವೇಶ್ವರ ಉಚಿತ ಪ್ರಸಾದ ನಿಲಯಕ್ಕೆ 5ರಿಂದ 10ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ.
ಅರ್ಜಿಯೊಂದಿಗೆ ಹಿಂದಿನ ವರ್ಷ ತೇರ್ಗಡೆಯಾದ ಅಂಕಪಟ್ಟಿ ಮತ್ತು ಜಾತಿ ಪ್ರಮಾಣಪತ್ರದ ದೃಢಿಕೃತ ಝರಾಕ್ಸ್ ಪ್ರತಿ ಲಗತ್ತಿಸಬೇಕು ಹಾಗೂ ಅಂಗವಿಕಲರಿಗೆ ಶೇ. 5ರಷ್ಟು ಮೀಸಲಿರುವುದರಿಂದ ಅಂತಹ ವಿದ್ಯಾರ್ಥಿಗಳು ಸ್ಪಷ್ಟವಾಗಿ ನಮೂದಿಸಬೇಕು(ಅಂಗವಿಕಲತೆ ಪ್ರಮಾಣ ಪತ್ರ ಲಗತ್ತಿಸಬೇಕು).
ಆಸಕ್ತ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ನಿಗದಿತ ಅರ್ಜಿ ನಮೂನೆಗಳನ್ನು ಬ್ಯಾಡಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಂಬಂಧಿಸಿದ ನಿಲಯ ಮೇಲ್ವಿಚಾರಕರಿಂದ ಕೆಸಲದ ವೇಳೆಯಲ್ಲಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕೆಂದು ಬ್ಯಾಡಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

