ಹಾವೇರಿ

ಮತಗಟ್ಟೆಗೆ ವಾಹನ ಸೇವೆ: ತರಾಟೆಗೆ

Published On :

ಹಾವೇರಿ:  ಮತಗಟ್ಟೆಗೆ ಟಾಟಾ ಏಸ್ ವಾಹನದಲ್ಲಿ ಮತದಾರರನ್ನು ಕರೆದುಕೊಂಡು ಬರುತ್ತಿದ್ದ ವಾಹನ ಚಾಲಕ ಹಾಗೂ ಆರಕ್ಷಕ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ದೇವಿಹೊಸೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಕೇಂದ್ರದ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿತು.
ವಯೋವೃದ್ಧ ಹಾಗೂ ವಿಕಲಾಂಗರನ್ನು ಮನೆ-ಮನೆಯಿಂದ ಮತಗಟ್ಟೆ ಕೇಂದ್ರಕ್ಕೆ ಕರೆದುಕೊಂಡು ಬರುತ್ತಿದ್ದ ಯುವಕನಿಗೆ ಪೊಲೀಸರು ಮತಗಟ್ಟೆ ಕೇಂದ್ರದ ಮುಂಭಾಗದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೇಂದ್ರದ ಪಕ್ಕದ ವರೆಗೂ ಮತದಾರರನ್ನು ಕರೆತಂದಿದ್ದು ಇದಕ್ಕೆ ಕಾರಣವಾಗಿತ್ತು. ಆದರೂ, ವಾಹನ ಚಾಲಕ ಪೊಲೀಸರ ಮಾತಿಗೆ ಕಿವಿಗೊಡದೆ ತನ್ನ ಕಾಯಕ ಮುಂದುವರೆಸಿದ್ದ ಎಂದು ತಿಳಿದು ಬಂದಿದೆ.
ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ನಿಲ್ಲಲೂ ಸಾಧ್ಯವಾಗದ ವಯೋವೃದ್ಧೆ ಸೇರಿ ನಾಲ್ಕಾರು ಜನರನ್ನು ಈ ಯುವಕ ಮತಕೇಂದ್ರಕ್ಕೆ ಕರೆತಂದಿದ್ದ. ಆಗ ಪೊಲೀಸರು ಆತನನ್ನು ತರಾಟೆಗೆ ತೆಗೆದುಕೊಂಡರು. ಆದರೆ, ಚಾಲಕ ವೃದ್ಧರು ಹಾಗೂ ವಿಕಲಾಂಗರ ಕೋರಿಕೆ ಮೇರೆಗೆ ತಾನು ಅವರನ್ನು ಮತಕೇಂದ್ರಕ್ಕೆ ಕರೆತಂದಿದ್ದೇನೆ. ಯಾವ ಪಕ್ಷಕ್ಕೂ ಮತ ನೀಡಿ ಎಂದು ವಿನಂತಿ ಮಾಡಿಲ್ಲ ಎಂದು ವಿವರಣೆ ನೀಡಿದ. ಇದಕ್ಕೆ ಒಪ್ಪದ ಪೊಲೀಸರು ವಾಹನವನ್ನು ಮತದಾನ ಮುಗಿಯುವ ತನಕ ಶಾಲೆ ಪಕ್ಕದಲ್ಲಿ ನಿಲ್ಲಿಸುವಂತೆ ಸೂಚಿಸಿ, ಘಟನೆಗೆ ಇತಿಶ್ರೀ ಹಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.