ಹಾವೇರಿ

3ನೇ ಬಾರಿ ಸೋತ ಖಾದ್ರಿ

Published On :

ಶಿಗ್ಗಾಂವಿ: ತೀವ್ರ ಕುತೂಹಲ ಕೆರಳಿಸಿದ್ದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸತತ ಎರಡನೇ ಬಾರಿ ಗೆಲುವಿನ ನಗೆ ಬೀರಿದ್ದಾರೆ. ಅವರ ಪ್ರತಿಸ್ಪರ್ಧಿ, ಕಾಂಗ್ರೆಸ್‌ನ ಅಜ್ಜಂಪೀರ ಖಾದ್ರಿ ಮೂರನೇ ಬಾರಿಗೆ ಸೋತು ತೀವ್ರ ಮುಖಭಂಗ ಅನುಭವಿಸಿದ್ದಾರೆ. ಗುರು-ಶಿಷ್ಯದ ಕಾಳಗದ ಕಣ ಎಂದೇ ಬಿಂಬಿತವಾಗಿದ್ದ ಶಿಗ್ಗಾಂವಿ ಮತಕ್ಷೇತ್ರದಲ್ಲಿ ಜನತೆ ಅಭಿವೃದ್ಧಿ ಕಾರ್ಯಗಳಿಗೆ ಮಣೆ ಹಾಕಿದ್ದಾರೆ. ಜಲಸಂಪನ್ಮೂಲ ಸಚಿವರಾಗಿ ಕ್ಷೇತ್ರದಲ್ಲಿ ಭೂಮಿತಾಯಿಗೆ ಹಸಿರು ಸೀರೆ ಉಡಿಸಿದ ಬೊಮ್ಮಾಯಿ ಅವರನ್ನು ಎರಡನೇ ಬಾರಿಗೆ ಶಾಸಕರನ್ನಾಗಿ ಮಾಡಿದ್ದಾರೆ.
ವಿಜಯೋತ್ಸವ: ಬಂಕಾಪುರ ಸಮೀಪ ಸಾವಿರಾರು ಕಾರ್ಯಕರ್ತರು ಜಮಾಯಿಸಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗಮನಕ್ಕೆ ಕಾದರು. ಬೊಮ್ಮಾಯಿ ಬರುವುದು ತಡವಾದರೂ ಹರ್ಷೋದ್ಘಾರಕ್ಕೆ ಕೊರತೆಯಾಗಲಿಲ್ಲ. ಗುಲಾಲು ಎರಚಿ, ಬೈಕ್‌ಗಳಿಗೆ ಬಿಜೆಪಿ ಬಾವುಟ ಕಟ್ಟಿದ ಕಾರ್ಯಕರ್ತರು ಸಂಭ್ರಮಿಸಿದರು. ಬೊಮ್ಮಾಯಿ ಬಂದಾಗ 'ಬೊಮ್ಮಾಯಿಯವರಿಗೆ ಜಯವಾಗಲಿ' ಎಂದು ಘೋಷಣೆ ಕೂಗಿ ಗುಲಾಲು ಎರಚಿ, ತಮ್ಮ ಸಂತೋಷ ವ್ಯಕ್ತಪಡಿಸಿದರು. ಜನತೆ ಪಟಾಕಿ ಸಿಡಿಸಿ, ಬಣ್ಣ ಎರಚಿ ಕುಣಿದಾಡಿದರು. ಬಸವರಾಜ ಬೊಮ್ಮಾಯಿ ಅವರನ್ನು ಟ್ರ್ಯಾಕ್ಟರ್ ಹತ್ತಿಸಿ ಪಟ್ಟಣದಲ್ಲಿ ನೂರಾರು ವಾಹನಗಳೊಂದಿಗೆ ಮೆರವಣಿಗೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.