ಅಭಿವೃದ್ಧಿಗೆ ಶ್ರಮಿಸುವೆ: ಶಿವಣ್ಣನವರ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಮೇ 9
ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಶಿವಣ್ಣನವರ ಸ್ಪರ್ಧಿಸಿ ಗೆಲವು ಸಾಧಿಸಿದ್ದರ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣನವರ, ಗೆಲುವಿಗೆ ಸಹಕರಿಸಿದ ಕ್ಷೇತ್ರದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.
ಬಿಜೆಪಿ ಪಕ್ಷದ ದುರಾಡಳಿತದಿಂದ ಬೇಸತ್ತ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರ್ಥ ಮಾಡಿಕೊಂಡಿದ್ದೇನೆ. ಜನರ ಆಶೋತ್ತರಗಳಿಗೆ ಸ್ಪಂದಿಸುತ್ತೇನೆ ಎಂದ ಅವರು ಮತದಾರರ ಭಾವನೆಗಳಿಗೆ ಧಕ್ಕೆ ಬರದಂತೆ ನಡೆದುಕೊಳ್ಳುವುದಾಗಿ ಹೇಳಿದರು. ಎಸ್.ಆರ್.ಪಾಟೀಲ ಮಾತನಾಡಿದರು.
ರಮೇಶ್, ಹುಸೇನ್ ಸಾಬ್ ದೊಡ್ಮನಿ, ಎಸ್.ಸಿ. ಶಿಡೇನೂರ, ಉಮೇಶ್ ಬೇಟಗೇರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

