ಹಾವೇರಿ

ಮೀನುಗಾರಿಕೆ ತರಬೇತಿ: ಅರ್ಜಿ ಆಹ್ವಾನ

Published On :

ಹಾವೇರಿ: ಶಿವಮೊಗ್ಗ ಜಿಲ್ಲೆಯ ಬಿ.ಆರ್. ಪ್ರಾಜೆಕ್ಟ್‌ನಲ್ಲಿರುವ ಒಳನಾಡು ಮೀನುಗಾರಿಕಾ ತರಬೇತಿ ಕೇಂದ್ರದಲ್ಲಿ ಎರಡು ತಿಂಗಳಾವಧಿಯ ತರಬೇತಿಗಾಗಿ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಗೆ 40 ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಿದ್ದು, ಅರ್ಜಿದಾರರು ಹಾವೇರಿ, ಗದಗ ಹಾಗೂ ಧಾರವಾಡ ಸೇರಿದಂತೆ ಒಳನಾಡು ಮೀನುಗಾರಿಕೆಗೆ ಅವಕಾಶವಿರುವ 17 ಜಿಲ್ಲೆಗಳ ಅಭ್ಯರ್ಥಿಗಳು ಅರ್ಹರಾಗಿದ್ದಾರೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಒಂದು ಸಾವಿರ ರೂ.ಗಳ ಶಿಷ್ಯವೇತನ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಮೀನುಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಸಾಗಣೆ, ಬಲೆ ಹೆಣೆಯುವುದು ಹಾಗೂ ದುರಸ್ತಿ ಮಾಡುವುದು, ಹರಿಗೋಲು ನಡೆಸುವುದು, ಮೀನು ಹಿಡಿಯುವುದು ಮತ್ತು ಅಲಂಕಾರಿಕ ಮೀನುಗಳ ಉತ್ಪಾದನೆ, ಪಾಲನೆ ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ತರಬೇತಿ ನೀಡಲಾಗುವುದು.
18ರಿಂದ 40 ವಯೋವಾನದ, 10ನೇ ತರಗತಿವರೆಗೆ ಓದಿ ಪಾಸ್ ಅಥವಾ ಫೇಲ್ ಆದ, ಮೀನುಗಾರಿಕಾ ವೃತ್ತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ಮೀನುಗಾರಿಕಾ ಸಹಕಾರ ಸಂಘದ ಸದಸ್ಯರಾಗಿದ್ದರೆ ಆದ್ಯತೆ ನೀಡಲಾಗುವುದು.
ಆಯ್ಕೆ ಸಂದರ್ಶನದ ಮೂಲಕ ನಡೆಯಲಿದ್ದು, ಸ್ವಂತ ಖರ್ಚಿನಲ್ಲಿ ಬರಬೇಕು. ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು.
ಇಚ್ಚಿತರು ಅರ್ಜಿ ನಮೂನೆ ಬೇಕಾದಲ್ಲಿ ಮುಂಗಡವಾಗಿ ಪತ್ರ ಬರೆದು ತಿಳಿಸಿ, ಖುದ್ದಾಗಿ ಹೋಗಿ ಅರ್ಜಿ ಪಡೆಯಬಹುದು. ಇಲ್ಲವೆ ಜಿಲ್ಲಾ ಅಥವಾ ತಾಲೂಕು ಮಟ್ಟದ ಮೀನುಗಾರಿಕಾ ಕಚೇರಿಗಳಲ್ಲಿ ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಪಡೆಯಬಹುದು. ಅಗತ್ಯ ದಾಖಲಾತಿಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-1) ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್. ಪ್ರಾಜೆಕ್ಟ್, ಶಿವಮೊಗ್ಗ ಜಿಲ್ಲೆ ಅವರಿಗೆ ಸಲ್ಲಿಸಬೇಕೆಂದು
ಬಿ.ಆರ್. ಪ್ರಾಜೆಕ್ಟ್ ಮೀನುಗಾರಿಕೆ ತರಬೇತಿ ಕೇಂದ್ರದ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.