ಇಂದು ಬಸವೇಶ್ವರ ಜಯಂತಿ
ಹಾನಗಲ್ಲ: ಜಗಜ್ಯೋತಿ ಬಸವೇಶ್ವರರ 880ನೇ ಜಯಂತ್ಯುತ್ಸವ ಕಾರ್ಯಕ್ರಮ ಮೇ 13ರಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಕನಕ ವೃತ್ತದಿಂದ ಅಂಬೇಡ್ಕರ್ ಭವನದ ವರೆಗೆ ನಡೆಯುವ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಹಾಗೂ 10.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ನೂತನ ಶಾಸಕ ಮನೋಹರ ತಹಸೀಲ್ದಾರ್ ಉದ್ಘಾಟಿಸುವರು. ತಾಪಂ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷ ಶಂಕ್ರಪ್ಪ ಮಾತನವರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಜಿಪಂ ಉಪಾಧ್ಯಕ್ಷೆ ಗೀತಾ ಅಂಕಸಖಾನಿ, ಎಪಿಎಂಸಿ ಅಧ್ಯಕ್ಷ ಬಿ.ಎಸ್. ಅಕ್ಕಿವಳ್ಳಿ, ತಾಪಂ ಉಪಾಧ್ಯಕ್ಷೆ ಅನಿತಾ ಶಿವೂರ, ಎಪಿಎಂಸಿ ಉಪಾಧ್ಯಕ್ಷ ಷಣ್ಮುಖಯ್ಯ ಹಿರೇಮಠ, ಜಿಪಂ ಸದಸ್ಯರಾದ ಪದ್ಮನಾಭ ಕುಂದಾಪುರ, ಬಸವರಾಜ ಹಾದಿಮನಿ, ಕಸ್ತೂರವ್ವ ವಡ್ಡರ, ಮಹದೇವಪ್ಪ ಭಾಗಸರ, ಅಭಿದಾಬಿ ನದಾಫ, ಬಸವ ಸಮಿತಿ ಅಧ್ಯಕ್ಷ ಗುರುಸಿದ್ದಪ್ಪ ಕೊಂಡೋಜಿ ಅತಿಥಿಗಳಾಗಿ ಪಾಲ್ಗೊಳ್ಳುವರು. ತಾಪಂ ಇಓ ಮನೋಜಕುಮಾರ ಗಡಬಳ್ಳಿ, ಸಿಪಿಐ ಬಿ.ಎಸ್. ಮಂಟೂರು, ಪುರಸಭೆ ಮುಖ್ಯಾಧಿಕಾರಿ ಸೋಮಶೇಖರ, ತಾಪಂ, ಪುರಸಭೆ ಸದಸ್ಯರು ಉಪಸ್ಥಿತರಿರುವರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಹನುಮಂತಗೌಡ ಗೊಲ್ಲರ, ಅಕ್ಕಿಆಲೂರಿನ ಸರ್ಕಾರಿ ಉರ್ದು ಪ್ರೌಢಶಾಲೆ ಕನ್ನಡ ಶಿಕ್ಷಕ ವಿಷ್ಣು ಪಟಗಾರ ಬಸವೇಶ್ವರರ ಕುರಿತು ಉಪನ್ಯಾಸ ನೀಡುವರು ಎಂದು ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ಡಾ. ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

