ಹಾವೇರಿ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

Published On :

ಹುಕ್ಕೇರಿ: ತಾಲೂಕಿನ ಕಣಗಲಾ ಗ್ರಾಮದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣವೊಂದು ಮೂರು ತಿಂಗಳ ನಂತರ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಫೆ.6ರಂದು ಗ್ರಾಮದಿಂದ ಸ್ವಲ್ಪ ದೂರದಲ್ಲಿ ಇದ್ದ ಬಾವಿಯಿಂದ ಕುಡಿಯುವ ನೀರು ತರಲು ಹೋಗಿದ್ದ ವೇಳೆ 16 ವರ್ಷದ ಬಾಲಕಿ ಮೇಲೆ ಮೂವರು ಯುವಕರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೇ ಅತ್ಯಾಚಾರವನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು. ವಿಡಿಯೋ ಚಿತ್ರೀಕರಣ ತೋರಿಸಿ ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಇವರ ಕಿರುಕುಳ ತಾಳಲಾರದೇ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಪಾಲಕರು ಶನಿವಾರ ಸಂಕೇಶ್ವರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಗಳಾದ ಮಾರುತಿ ಮಾಳೆ(19) ಓಂಕಾರ ಪಾಟೀಲ, (16) ಹಾಗೂ ಓಂಕಾರ ತಪಕೇರಿ (17) ಎಂಬವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.