ಸನಾತನ ಸಂಸ್ಕೃತಿ ಸಾರಿದ ಶಂಕರಾಚಾರ್ಯರು
ಕನ್ನಡಪ್ರಭ ವಾರ್ತೆ, ಹಾವೇರಿ, ಮೇ 15
ಸನಾತನ ಭಾತರದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಆಯೋಜಿಸಿದ್ದ ಆದಿ ಕವಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಶಾಸ್ತ್ರಜ್ಞರ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಶಂಕರಾಚಾರ್ಯರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸುವ ಮೂಲಕ ಗೌರವ ಸಲ್ಲಿಸಿದರು.
ತಮ್ಮ ಬಾಲ್ಯದ ವಿದ್ಯಾಭ್ಯಾಸವನ್ನು ಗೋವಿಂದ ಭಗವತ್ಪಾದರಲ್ಲಿ ಆರಂಭಿಸಿದ ಶಂಕರಾಚಾರ್ಯರು ತಮ್ಮ ಜೀತಾವಧಿಯ 32 ವರ್ಷಗಳಲ್ಲಿ ದೇಶದ ಉದ್ದಗಲಕ್ಕೂ ಸಂಚರಿಸಿ, ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತವಾದ ಅದ್ವೈತ ತತ್ವನ್ನು ಪ್ರತಿಪಾದಿಸುತ್ತಾ ಜಗತ್ತಿಗೆ ಸಾರುತ್ತಾ ಹಲವಾರು ಮತಗಳಿಂದ ದಾಳಿಗೊಳಾಗುತ್ತಿದ್ದ ಸನಾತನ ಹಿಂಧೂ ಧರ್ಮ ಪುನರುತ್ಥಾನಗೊಳಿಸಿದ್ದಾರೆ. ಬಾಲ್ಯದಲ್ಲಿ ತಂದೆಯನ್ನು ಕಳೆದುಕೊಂಡ ಶಂಕರಾಚಾರ್ಯರು, ಆಧ್ಯಾತ್ಮಿಕತೆಯಲ್ಲಿ ಆಸಕ್ತಿ ತಳೆದರು. ಸನ್ಯಾಸತ್ವ ಸ್ವೀಕರಿಸಲು ಒಲವು ತೋರಿದ ಶಂಕರರು, ತಾಯಿಯ ಮನವೊಲಿಸಲು ಬಹಳಕಷ್ಟಪಡುವಂತಾಯಿತು ಎಂದು ಹೇಳಿದರು.
ದೇಶದ ಮೂಲೆ ಮೂಲೆಗೂ ಭೇಟಿ ನೀಡಿದ ಶಂಕರಾಚಾರ್ಯರು, ಅಗಾದ ತತ್ವಜ್ಞಾನದ ಆಧ್ಯಾತ್ಮ ಪಾಂಡಿತ್ಯ ಸಂಪಾದಿಸಿ ಹಲವಾರು ಶಿಷ್ಯರನ್ನು ಬೆಳೆಸಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದರು. ಉತ್ತರಲ್ಲಿ ಬದರಿಪೀಠ, ದಕ್ಷಿಣದಲ್ಲಿ ಶೃಂಗೇರಿ ಪೀಠ, (ಶೃಂಗೇರಿ ಶಾರದಾಂಬೆ ಮಠ), ಪೂರ್ವದಲ್ಲಿ ಪುರಿ ಗೋವರ್ಧನ ಪೀಠ ಹಾಗೂ ಪಶ್ಚಿಮದಲ್ಲಿ ದ್ವಾರಕಾಪೀಠ ಸ್ಥಾಪಿಸಿ, ಪ್ರತಿಯೊಂದು ಪೀಠಕ್ಕೂ ತಮ್ಮ ಶಿಷ್ಯರನ್ನು ಪೀಠಾಧಿಪತಿಯನ್ನಾಗಿಸಿ, ಅದ್ವೈತ ಸಿದ್ಧಾಂತವನ್ನು ಜನಪ್ರಿಯಗೊಳಿಸಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹಾಂತೇಶ ಬೀಳಗಿ, ಯೋಜನಾಧಿಕಾರಿ ಬಸನಗೌಡ್ರ, ಮುಖ್ಯ ಲೆಕ್ಕಾಧಿಕಾರಿ ಶಿವಪುತ್ರಪ್ಪ, ಪರೀಕ್ಷಾರ್ಥಿ ಉಪ ವಿಭಾಗಾಧಿಕಾರಿ ಸತೀಶ ಕುಮಾರ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

