ಹಾವೇರಿ

ಅಕ್ರಮ ಮರುಳು ಗಣಿಗಾರಿಕೆ: 5 ದೋಣಿ ನಾಶ

Published On :

ಹಾವೇರಿ: ತಾಲೂಕಿನ ಗಳಗನಾಥ, ಮೇವುಂಡಿ, ತೆರೆದಹಳ್ಳಿ ಗ್ರಾಮಗಳ ವ್ಯಾಪ್ತಿಯ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ 5 ಯಾಂತ್ರಿಕ ದೋಣಿಗಳನ್ನು ನಾಶಪಡಿಸಲಾಯಿತು.
ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ ಸಂದರ್ಭ ಅಂದಾಜು ರು. 25 ಲಕ್ಷ ಮೌಲ್ಯದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಂಗ್ರಹಣೆ ಮಾಡಿರುವುದನ್ನು ಪತ್ತೆಹಚ್ಚಿದ ತಹಸೀಲ್ದಾರರು ಶಿರಹಟ್ಟಿ ಮತ್ತು ಗಣಿ ಇಲಾಖೆ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆರವರು ರು. 1.5 ಲಕ್ಷ ಮೌಲ್ಯ ಸಾಮಗ್ರಿ ವಶಕ್ಕೆ ಪಡೆದು ತನಿಖೆಗೆ ಒಳಪಡಿಸಲಾಗಿದೆ.
ಹಾವೇರಿ ತಾಲೂಕಿನ ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ ಅಂದಾಜು ರು. 5 ಲಕ್ಷ ಮೌಲ್ಯದ ಕಟ್ಟೆಗಳು, ಬ್ಯಾರೆಲ್ ಮತ್ತು ಪೈಪುಗಳನ್ನು ನಾಶಪಡಿಸಲಾಯಿತು. ಜಂಟಿ ಕಾರ್ಯಾಚರಣೆಯಲ್ಲಿ ತಹಸೀಲ್ದಾರ್ ಕೆ. ಶಿವಲಿಂಗು, ವೃತ್ತ ನಿರೀಕ್ಷಕರಾದ ಸಿದ್ದರಾಮೇಶ್ವರ, ಗುತ್ತಲ ಪೊಲೀಸ್ ಠಾಣೆ ಸಬ್ ಇನ್ಸ್‌ಪೇಕ್ಟರ್ ಪ್ರಹ್ಲಾದ ಚನ್ನಗಿರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿಗಳಾದ ಶಬ್ಬೀರ ಅಹ್ಮದ್, ಕೆ. ಶ್ರೀನಿವಾಸ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶೇಖರಪ್ಪ, ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.