ವಿವಿಧ ತರಬೇತಿಗೆಅರ್ಜಿ ಆಹ್ವಾನ
ಹಾವೇರಿ: ಹಳಿಯಾಳ ಕೆನರಾ ಬ್ಯಾಂಕ್ ಮತ್ತು ವಿಆರ್ಡಿಎಂ ಟ್ರಸ್ಟ್ನಿಂದ ಪ್ರಾಯೋಜಿತ ದೇಶಪಾಂಡೆ ರುಡ್ಸೆಟ್ ಸಂಸ್ಥೆಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ಆಸಕ್ತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಉಚಿತ ವಿವಿಧ ಸ್ವ-ಉದ್ಯೋಗ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೇ 14ರಿಂದ ಪುರುಷರಿಗಾಗಿ ವಸ್ತ್ರವಿನ್ಯಾಸ ತರಬೇತಿ, ಮೇ 20ರಿಂದ 25ರ ವರೆಗೆ ಹೈನುಗಾರಿಕೆ ತರಬೇತಿ ಮತ್ತು ಜೂನ್ ತಿಂಗಳಲ್ಲಿ ಎಸಿ ಹಾಗೂ ರೇಪ್ರಿಜರೇಟರ್ ತರಬೇತಿಗಳು ಜರುಗಲಿವೆ. ತರಬೇತಿ ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ.
18ರಿಂದ 45 ವರ್ಷದೊಳಗಿನ ಕರ್ನಾಟಕ ರಾಜ್ಯದ ಯಾವುದೇ ಭಾಗದ ಆಸಕ್ತರು ತರಬೇತಿಯಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಪಡೆಯಲಿಚ್ಛಿಸುವ ತರಬೇತಿ, ವಿದ್ಯಾರ್ಹತೆ, ಆಯ್ದ ವಿಷಯದಲ್ಲಿ ಪ್ರಾಥಮಿಕ ಜ್ಞಾನ, ಅನುಭವ ಮುಂತಾದ ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿ ಹಾಳೆಯಲ್ಲಿ ಬರೆದು, ನಿರ್ದೇಶಕರು, ದೇಶಪಾಂಡೆ ರುಡ್ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ಹಳಿಯಾಳ-581329 ಅವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08284-220807, ಮೊಬೈಲ್ ನಂಬರ್ 9482188780, 94834 85489 ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

