ಹಾವೇರಿ

ದಲಿತ ಸಾಹಿತ್ಯ ಕೃತಿಗೆ ಅರ್ಜಿ ಆಹ್ವಾನ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಮೇ 18
ಚಿತ್ರದುರ್ಗದಲ್ಲಿ ನಡೆದ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಎಲ್. ಬಸವರಾಜು ಅವರು ರು. 1 ಲಕ್ಷದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಮೃತಮಹೋತ್ಸವ ಸವಿನೆನಪು ದತ್ತಿ ಸ್ಥಾಪಿಸಿದ್ದಾರೆ. ಆ ದತ್ತಿ ಹಣದಿಂದ ಸಂಗ್ರಹವಾಗುವ ಬಡ್ಡಿ ಹಣದಲ್ಲಿ ಉತ್ತಮ ದಲಿತ ಸಾಹಿತ್ಯ ಕೃತಿಗೆ ರು. 5000 ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ ತಿಳಿಸಿದ್ದಾರೆ. 2012ನೇ ಸಾಲಿನ ಯಾವುದೇ ಪ್ರಕಾರದ, ಪ್ರಕಟವಾದ ಉತ್ತಮ ದಲಿತ ಸಾಹಿತ್ಯ ಕೃತಿಯನ್ನು ಸ್ಪರ್ಧೆಗೆ ಕಳಿಸಬಹುದು. ಪ್ರತಿ ಪ್ರವೇಶಕ್ಕೆ ಮೂರು ಪುಸ್ತಕಗಳನ್ನು ಕಳಿಸಬೇಕು. ಸ್ಪರ್ಧೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಬಹುಮಾನದ ಬಗ್ಗೆ ಪರಿಷತ್ತು ನೇಮಿಸಿದ ತೀರ್ಪುಗಾರರ ಶಿಫಾರಸು ಅಂತಿಮ. ಸ್ಪರ್ಧೆಗೆ ಪುಸ್ತಕ ಕಳಿಸಲು 30 ಜೂನ್, 2013 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26623584, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು ಅವರನ್ನು ಸಂಪರ್ಕಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.