ಭಯೋತ್ಪಾದನೆ ವಿರೋಧಿ ದಿನ
ಹಾವೇರಿ: ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮೇ 21ರ ಬೆಳಗ್ಗೆ 11ಕ್ಕೆ ಭಯೋತ್ಪಾದನೆ ವಿರೋಧಿ ದಿನ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.
ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾವೇರಿ: ಧಾರವಾಡ ಕೃಷಿ ವಿಶ್ವವಿದ್ಯಾಲಯ 2013-14ನೇ ಸಾಲಿನ ಕೃಷಿ ಮೇಳದ ಅಂಗವಾಗಿ ಶ್ರೇಷ್ಠ ಕೃಷಿಕ, ಕೃಷಿಕ ಮಹಿಳೆ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಆದಾಯೋತ್ಪನ್ನ ಚಟುವಟಿಕೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಹಾವೇರಿ ಜಿಲ್ಲೆಯ ರೈತರು, ರೈತ ಮಹಿಳೆಯರು ಜೂನ್ 10ರೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಸೂಕ್ತ ದಾಖಲಾತಿ, ಅಗತ್ಯ ಛಾಯಾಚಿತ್ರಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಕಾರ್ಯಕ್ರಮ ಸಂಯೋಜಕರು, ಕೃಷಿ ವಿಜ್ಞಾನ ಕೇಂದ್ರ, ಹನುಮನಮಟ್ಟಿ, ರಾಣಿಬೆನ್ನೂರು ತಾಲೂಕು ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. 08373-253524, ಮೊ. 9448495338 ಸಂಪರ್ಕಿಸಬೇಕೆಂದು ಹನುಮನಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಹಾವೇರಿ: ಕನ್ನಡ ಪುಸ್ತಕ ಪ್ರಾಧಿಕಾರವು 2010ನೇ ಸಾಲಿನಲ್ಲಿ ಪ್ರಥಮ ಆವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಿದೆ. ನಿಗದಿತ ಅರ್ಜಿ ನಮೂನೆಯನ್ನು 20 ಮೇ, 2013ರಿಂದ 5 ಜೂನ್, 2013ರ ವರೆಗೆ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ಹಾಗೂ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಸಮಯದಲ್ಲಿ ಉಚಿತವಾಗಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಅವರಿಗೆ 15 ಜೂನ್, 2013ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002, ದೂ. 080-22484516, 22107704 ಸಂಪರ್ಕಿಸಬಹುದು.
ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಬ್ಯಾಡಗಿ: ಶಿಷ್ಯವೇತನಕ್ಕಾಗಿ ತಾಲೂಕಿನ ವೀರಶೈವ ಜಂಗಮ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜ. ಪಂಚಾಚಾರ್ಯ ಯುವ ವೇದಿಕೆ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೆ. 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಿದೆ. ಮುಖ್ಯೋಪಾಧ್ಯಾಯರಿಂದ ದೃಢೀಕೃತ ಅಂಕಪಟ್ಟಿ, ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರ ಲಗತ್ತಿಸಿದ ಅರ್ಜಿಯನ್ನು ಮೇ 31ರೊಳಗಾಗಿ ಗಣೇಶ ಆಫ್ಸೆಟ್ ಪ್ರಿಂಟರ್ಸ್, ಬಸವೇಶ್ವರ ನಗರ, ಬ್ಯಾಡಗಿ ವಿಳಾಸಕ್ಕೆ ತಲುಪಿಸಲು ಕಾರ್ಯದರ್ಶಿ ಬುಡಪನಹಳ್ಳಿಮಠ ಕೋರಿದ್ದಾರೆ. ಮಾಹಿತಿಗೆ ಆರ್.ಜಿ. ಹಾಲೇವಾಡಿಮಠ, ಮೊ. 9845552519, ಗಿರೀಶ ಇಂಡಿಮಠ, ಮೊ. 9242118069 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

