ಹಾವೇರಿ

ನಿರುದ್ಯೋಗಿ ಯುವಕರಿಂದ ಪ್ರವಾಸಿ ಟ್ಯಾಕ್ಸಿಗೆ ಅರ್ಜಿ ಆಹ್ವಾನ

Published On :

ಹಾವೇರಿ: ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಒದಗಿಸಲು ಅರ್ಜಿ ಆಹ್ವಾನಿಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಅರ್ಹ ನಿರುದ್ಯೋಗಿ ವಿದ್ಯಾವಂತ ಯುವಕರಿಗೆ 11, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ನಿರುದ್ಯೋಗಿ ವಿದ್ಯಾವಂತ ಯುವಕರಿಗೆ 7 ಟಾಟಾ ಇಂಡಿಕಾ ಟ್ಯಾಕ್ಸಿಗಳನ್ನು ನೀಡಲಾಗುವುದು. ಪ್ರವಾಸಿ ಟ್ಯಾಕ್ಸಿಗೆ ತಗಲುವ ಒಟ್ಟು ವೆಚ್ಚದ ಶೇ. 50ರಷ್ಟನ್ನು ಪ್ರವಾಸೋದ್ಯಮ ಇಲಾಖೆಯಿಂದ ಧನಸಹಾಯದ ರೂಪದಲ್ಲಿ ಒದಗಿಸಲಾಗುವುದು. ಶೇ. 5ರಷ್ಟನ್ನು ಫಲಾನುಭವಿಗಳು ಭರಿಸಬೇಕು. ಶೇ. 45ರಷ್ಟನ್ನು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸಾಲ ಮಂಜೂರು ಮಾಡಿಸಲಾಗುವುದು. ಅಭ್ಯರ್ಥಿ ಪ. ಜಾತಿ, ಪ. ಪಂಗಡಕ್ಕೆ ಸೇರಿದವರಾಗಿರಬೇಕು. 20ರಿಂದ 40 ವರ್ಷದೊಳಗಿನ ಹಾವೇರಿ ಜಿಲ್ಲೆಯಲ್ಲಿ ವಾಸಿಸುತ್ತಿರುವ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಪ್ರದೇಶದವರ ವಾರ್ಷಿಕ ಆದಾಯ ರು. 40 ಸಾವಿರ ಹಾಗೂ ನಗರ ಪ್ರದೇಶದವರ ವಾರ್ಷಿಕ ಆದಾಯ ರು. 55 ಸಾವಿರ  ಮೀರಬಾರದು. ಅಭ್ಯರ್ಥಿಗಳು ಲಘು ವಾಹನ ಚಾಲನೆ ಪರವಾನಿಗೆ ಹಾಗೂ ಬ್ಯಾಡ್ಜ್ ಹೊಂದಿರಬೇಕು. ಅರ್ಜಿದಾರರ ಕುಟುಂಬದಲ್ಲಿ ಕಾಯಂ ನೌಕರಿಯಲ್ಲಿರಬಾರದು. ತಹಸೀಲ್ದಾರ್‌ರಿಂದ ಪಡೆದ ಪ್ರಸಕ್ತ ಸಾಲಿನ ಆದಾಯ ಪತ್ರ, ರಹವಾಸಿ ಪ್ರಮಾಣಪತ್ರ ಸೌಲಭ್ಯ ಪಡೆಯದಿರುವ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು. ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಹಾವೇರಿ ಅವರಿಹೆ ಇತ್ತೀಚಿನ ಭಾವಚಿತ್ರದೊಂದಿಗೆ ಭರ್ತಿ ಮಾಡಿ ದ್ವಿಪ್ರತಿಯಲ್ಲಿ 25 ಜೂನ್, 2013ರೊಳಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಆಡಳಿತ ಭವನ, ಹಾವೇರಿ ಇವರಿಗೆ ಸಲ್ಲಿಸಬೇಕೆಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.