ಸಚಿವ ಸ್ಥಾನ: 22ರಂದು ಹೆದ್ದಾರಿ ಬಂದ್
ರಾಣಿಬೆನ್ನೂರು: ಜಿಲ್ಲಾ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಕಾಂಗ್ರೆಸ್ ಶಾಸಕರಲ್ಲಿ ಹಿರಿಯರಾಗಿರುವ ಕೆ.ಬಿ. ಕೋಳಿವಾಡ ಅರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆ ಸಮಯದಲ್ಲಿ ಪ್ರಚಾರ ಭಾಷಣಲ್ಲಿ ತಿಳಿಸಿದ ಪ್ರಕಾರ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಮೇ 22ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸುವುದಾಗಿ ಬಿ.ಎಂ. ಜಯದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿರುವ ಬಿಜೆಪಿ ಸರ್ಕಾರ ಜಿಲ್ಲೆಗೆ 4 ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ, 2 ಉನ್ನತ ಮಂತ್ರಿಗಳ ಸ್ಥಾನ ನೀಡಿತ್ತು. ಚುನಾವಣೆ ಸಮಯದಲ್ಲಿ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ. ಕೋಳಿವಾಡರು ಹಿರಿಯರಿದ್ದಾರೆ. ಅವರಿಗೆ ಮತ ನೀಡಿ ಅವರನ್ನು ಆಯ್ಕೆ ಮಾಡಿದಲ್ಲಿ ಮಂತ್ರಿಗಳನ್ನಾಗಿ ಮಾಡುತ್ತೇವೆ ಎಂದು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಣಿಬೆನ್ನೂರಿನಲ್ಲಿ ನಡೆದ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಹೇಳಿದ್ದರು. ಅದರಂತೆ ತಾಲೂಕಿನ ಸಮಸ್ತ ಮತದಾರರು ಕೆ.ಬಿ. ಕೋಳಿವಾಡರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ.
ಮೇ 18ರಂದು ನಡೆದ ರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪ್ರಮಾಣ ವಚನ ಸ್ವಿಕಾರ ಸಮಾರಂಭದಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರಲ್ಲಿ ಹಿರಿಯರಾದ ಕೆ.ಬಿ. ಕೋಳಿವಾಡರವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂತ್ರಿಗಳನ್ನಾಗಿ ಮಾಡುತ್ತಾರೆಂಬ ನಂಬಿಕೆಯಿಂದ ಕಾದು ಕುಳಿತಿದ್ದ ಜಿಲ್ಲೆಯ ಜನತೆಯ ಉತ್ಸಾಹಕ್ಕೆ ತಣ್ಣಿರೆರದಂತಾಗಿದೆ.
ರಾಜ್ಯದಲ್ಲಿ ನಾಲ್ಕುವರೆ ವರ್ಷ ಆಡಳಿತ ನಡೆಸಿರುವ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿ ಸಾಕಷ್ಟು ಹಗರಣಗಳನ್ನು ಮಾಡಿ ಜೈಲು ಸೇರಿ ರಾಜ್ಯಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಹೊಸ ಮನ್ವಂತರವನ್ನು ಸೃಷ್ಟಿ ಮಾಡಲೆಂದು ಹೊರಟಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರಿನಲ್ಲಿ ಜಿಲ್ಲೆಯಲ್ಲಿಯೇ ಜನ್ಮ ತಾಳಿರುವ ಕೆಜೆಪಿಯನ್ನು ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಕೆ.ಬಿ. ಕೋಳಿವಾಡ, ಮನೋಹರ್ ತಹಸೀಲ್ದಾರ್, ಬಸವರಾಜ ಶಿವಣ್ಣನವರ ಹಾಗೂ ರುದ್ರಪ್ಪ ಲಮಾಣಿಯವರು ಧೂಳಿಪಟವಾಗಿಸಿದ್ದಾರೆ.
ಈ ದಿಸೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟದಲ್ಲಿ ಸೂಕ್ತ ಸ್ದಾನಮಾನವನ್ನು ನೀಡಬೇಕೆಂದು ಆಗ್ರಹಿಸಿ ಮೇ 22 ರಂದು ಹಾವೇರಿ ನಗರದ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟಿಸುವುದಾಗಿ ಬಿ.ಎಂ. ಜಯದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

