ಹಾವೇರಿ

ಕೃಷಿ ಪತ್ತಿನ ಸಂಘಗಳು ಬಡವರ ಅಭಿವೃದ್ಧಿಗೆ ಶ್ರಮಿಸಲಿ: ಪಾಟೀಲ

Published On :

ಹಿರೇಕೆರೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ರೈತರಿಗೆ ಹಾಗೂ ಬಡಜನತೆಗೆ ಆರ್ಥಿಕ ಸಬಲತೆಗೆ ಪೂರಕವಾಗಿ ಕೆಲಸ ನಿರ್ವಹಿಸವುದು ಅಗತ್ಯವಾಗಿದೆ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಸಹಕಾರಿ ಧುರೀಣ ಎಸ್.ಎಸ್. ಪಾಟೀಲ ಮನವಿ ಮಾಡಿದರು.
ನಬಾರ್ಡ್ ಬೆಂಗಳೂರು ಮತ್ತು ಕೆಸಿಸಿ ಬ್ಯಾಂಕ್ ಹಿರೇಕೆರೂರು ಆಶ್ರಯದಲ್ಲಿ ಕೆಸಿಸಿ ಬ್ಯಾಂಕ್‌ನ ಸಭಾಭವನದಲ್ಲಿ ಜರುಗಿದ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಾಕಾರಿಗಳ ಜಂಟಿ ಬಾದ್ಯತಾ ಗುಂಪುಗಳ ಒಂದು ದಿನದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಜಂಟಿ ಬಾದ್ಯತಾ ಗುಂಪುಗಳ  ರಚನೆಯಿಂದ ರೈತರಿಗೆ ಸಾಕಷ್ಟು ಪ್ರಯೋಜನವಾಗಿಲಿದ್ದು, ಈ ತರಬೇತಿ ಪಡೆದು ಸದುಪಯೋಗಪಡಿಸಿಕೊಳ್ಳುವ ರೀತಿ ಜಾರಿಗೊಳಿಸಬೇಕು ಎಂದರು. ಕೆಸಿಸಿ ಬ್ಯಾಂಕಿನ ಕೇಂದ್ರ ಕಚೇರಿಯ ಕಿರು ಹಣಕಾಸು ವಿಭಾಗದ ನೋಡೆಲ್ ಅಧಿಕಾರಿ ಎಸ್.ವಿ. ನಾಯಕ ಪ್ರೊಜೆಕ್ಟರ್ ಮೂಲಕ ಜಂಟಿ ಬಾದ್ಯತಾ ಗುಂಪುಗಳ ಸದಸ್ಯರಿಗೆ ತರಬೇತಿ ನೀಡಿದರು.  ರಟ್ಟಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಸ್, ಪ್ಯಾಟಿಗೌಡರ ಅಧ್ಯಕ್ಷತೆ ವಹಿಸಿದ್ದರು. ಎಕೇಶ ಬಣಕಾರ ಇನ್ನಿತರರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.