ಹಾವೇರಿ

ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

Published On :

ಹಾವೇರಿ: ಹಾವೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ೤ ಪಾಂಡುರಂಗ ನಾಯಕ ಅವರು ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುಂಚೆ ಪಾಂಡುರಂಗ ನಾಯಕ ಅವರು ಗದಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾವೇರಿ: ಕೃಷಿ ವಲಯದಲ್ಲಿ ಗಮನಾರ್ಹ, ಭಿನ್ನವಾದ ಸಾಧನೆಗೈದ, ಮಣ್ಣು, ನೀರು ಮತ್ತು ನೈಸರ್ಗಿಕ ಸಂಪನ್ಮೂಲ ಸದ್ಬಳಕೆಯಿಂದ ಸಾಗುವಳಿಯಲ್ಲಿ ಅಧಿಕ ಗುಣಮಟ್ಟದ ಉತ್ಪಾದನೆ ಬರುವಂತೆ ಬದಲಾವಣೆ ತಂದಿರುವ ಹಾಗೂ ರೈತರ ಆರ್ಥಿಕ ಮಟ್ಟ ಸುಧಾರಣೆಗೆ ಅನುವಾಗುವಂತೆ ಸೃಜನಾತ್ಮಕ ಕಾರ್ಯದಿಂದ ರೈತ ಸಮುದಾಯದ ಶ್ರೇಯೋಭಿವೃದ್ಧಿ ಮತ್ತು ಮಾರ್ಗದರ್ಶಕರಾಗಿ ಶ್ರಮಿಸುತ್ತಿರುವ ಜಿಲ್ಲೆಯ ವ್ಯಕ್ತಿಗಳಿಂದ 2012-13ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಮೇ 31ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಥವಾ ಅಂಗ ಸಂಸ್ಥೆಗಳಿಂದ ಈ ಸಾಧನೆಗೆ ಈಗಾಗಲೇ ಪುರಸ್ಕೃತರಾದವರು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಂಗ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತರಾದವರು ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹರಲ್ಲ. ಪ್ರಶಸ್ತಿಯ ವಿವರ ಮತ್ತು ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರಗಳಿಂದ ಪಡೆಬಹುದು. ನಾಮ ನಿರ್ದೇಶನ ಪತ್ರಗಳನ್ನು ಕಡ್ಡಾಯವಾಗಿ ಆಯಾ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಹಾಗೂ ಕೃಷಿ ವಿಶ್ವ ವಿದ್ಯಾನಿಲಯಗಳ ತಜ್ಞರ ಶಿಫಾರಸಿನೊಂದಿಗೆ ಜಂಟಿ ಕೃಷಿ ನಿರ್ದೇಶಕರು (ವಿಸ್ತರಣೆ ಮತ್ತು ತರಬೇತಿ) ಕೃಷಿ ಇಲಾಖೆ, ಶೇಷಾದ್ರಿ ರಸ್ತೆ, ಬೆಂಗಳೂರು-560001 ಇವರಿಗೆ ಸಲ್ಲಿಸಬೇಕೆಂದು ಜಿಲ್ಲಾ ಕೃಷಿ ಜಂಟಿ ನಿರ್ದೇಶಕರು ಅರ್ಜಿ ನಮೂನೆಗಳನ್ನು ಇಲಾಖೆ ವೆಬ್‌ಸೈಟ್ ಡಿಡಿಠ/್ಠಛ್ಝಡಿಛಟ್ಝಡ್ಠಿಛ.್ಞಛ್ಠ.ಟ್ಝ್ಛಿ.್ಝಟಿನಲ್ಲಿ ಕ್ಲಿಕ್ಕಿಸಿ ಟೆಂಡರ್ ಪ್ರಕಟಣೆ ಮೆನುವಿನ ಸಬ್ ಮೆನುವಿನಲ್ಲಿ ಕೃಷಿ ಪಂಡಿತ ಪ್ರಶಸ್ತಿ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಶೇ. 74ರಷ್ಟು ಫಲಿತಾಂಶ
ರಾಣಿಬೆನ್ನೂರು: ಮಾರುತಿ ನಗರದಲ್ಲಿರುವ ಸರ್ಕಾರಿ ಕಾಲೇಜು 2012-13ನೇ ಸಾಲಿನ ದ್ವಿತೀಯ ಪಿಯುಸಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಕಲಾ ವಿಭಾಗದಿಂದ ಪರೀಕ್ಷೆಗೆ ಹಾಜರಾದ 50 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ಪಾಸಾಗಿದ್ದು, ಒಬ್ಬ ವಿದ್ಯಾರ್ಥಿ ಅತ್ಯುನ್ನತ ಶ್ರೆಣಿ, 13 ವಿದ್ಯಾರ್ಥಿಗಳು ಪ್ರಥಮ, 12 ವಿದ್ಯಾರ್ಥಿಗಳು ದ್ವಿತಿಯ ಶ್ರೇಣಿಯಲ್ಲಿ ಪಾಸಾಗಿದ್ದು, ಕಲಾ ವಿಭಾಗದ ಫಲಿತಾಂಶ ಶೇ. 74ರಷ್ಟಾಗಿದೆ. ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಕುಳಿತಿದ್ದ 70 ವಿದ್ಯಾರ್ಥಿಗಳಲ್ಲಿ 64 ವಿದ್ಯಾರ್ಥಿಗಳು ಪಾಸಾಗಿದ್ದು, 1 ಉನ್ನತ ಶ್ರೇಣಿ, 42 ಪ್ರಥಮ, 13 ದ್ವಿತೀಯ ಸ್ಥಾನದಲ್ಲಿ ಪಾಸಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ. 92ರಷ್ಟು ಫಲಿತಾಂಶ ಆಗಿರುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.