ಹಾವೇರಿ

ಸಂಸತ್ ಚುನಾವಣೆ ಶೀಘ್ರ

Published On :

ಬ್ಯಾಡಗಿ: ಯಾವುದೇ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದ್ದು, ಗುಜರಾತ್ ಸಿಎಂ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆಂದು ಕೆ.ಎಸ್. ಈಶ್ವರಪ್ಪ ಹೇಳಿದರು. ಮೋಟೆಬೆನ್ನೂರಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮನಮೋಹನ್ ಸಿಂಗ್‌ರನ್ನು ಬದಲಾಯಿಸುವ ಚಿಂತನೆ ನಡೆಸಿದ್ದಾರೆ. ದೇಶದಲ್ಲಿ ಹೊಸ ರಾಜಕೀಯ ಬೆಳವಣಿಗೆಯಾಗುವ ಲಕ್ಷಣಗಳಿವೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದೆ ಎಂದರು. ನಾನು ಸೇರಿದಂತೆ ಬಿಜೆಪಿಯ ಮೇಲ್ಮಟ್ಟದ ಕೆಲ ನಾಯಕರ ತಪ್ಪಿನಿಂದ ರಾಜ್ಯದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ತಪ್ಪನ್ನು ಸರಿಪಡಿಸಿಕೊಂಡು ಪಕ್ಷ ಸಂಘಟಿಸುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಜೆಪಿ ಉದಯದಿಂದಾದ ಮತಗಳ ವಿಭಜನೆ ಕಾರಣ. ಬಿಎಸ್‌ವೈ ಕೆಜೆಪಿ ಕಟ್ಟಿಲ್ಲ, ಪರೋಕ್ಷವಾಗಿ 6 ಸ್ಥಾನಗಳನ್ನು ಪಡೆದ ಕೆಜೆಪಿಗೆ ರಾಜ್ಯದಲ್ಲಿ ನೆಲೆಯಿಲ್ಲ ಎಂಬುದು ಸಾಬೀತಾಗಿದೆ. ಬಿಎಸ್‌ವೈ ತಮ್ಮ ಮೇಲಿನ ಭ್ರಷ್ಟಾಚಾರ ಆರೋಪಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಜೊತೆ ರಹಸ್ಯ ಮೈತ್ರಿ ಮಾಡಿಕೊಂಡಿದ್ದಾರೆಂದು ಆರೋಪಿಸಿದರು. ಚುನಾವಣೆ ಬಳಿಕ ಕೆಜೆಪಿ ಬೆಂಬಲಿಸಿದ ಮತದಾರರಿಗೆ ತಮ್ಮ ತಪ್ಪಿನ ಅರಿವಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಅವರೆಲ್ಲ ಬಿಜೆಪಿ ಬೆಂಬಲಿಸಲಿದ್ದಾರೆಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಎಸ್‌ವೈ ಮತ್ತೆ ಬಿಜೆಪಿ ಸೇರ್ಪಡೆಗೆ ಕೇಂದ್ರದ ವರಿಷ್ಠರಿಗೆ ಮನಸ್ಸಿಲ್ಲ. ರಾಜನಾಥಸಿಂಗ್ ಮುಂತಾದ ನಾಯಕರು ಭ್ರಷ್ಟಾಚಾರದ ಜೊತೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದಿದ್ದಾರೆ. ನಾನು ಕಾರ್ಯಕರ್ತ. ಈ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.