ತಹಸೀಲ್ದಾರ್ಗೆ ಮಂತ್ರಿ ಸ್ಥಾನ ನೀಡಿ
ಹಾನಗಲ್ಲ: ಹಾನಗಲ್ಲ ಶಾಸಕ ಮನೋಹರ ತಹಸೀಲ್ದಾರ್ಗೆ ಮಂತ್ರಿ ಸ್ಥಾನ ನೀಡಬೇಕು, ಹಾನಗಲ್ಲ ತಾಲೂಕಿನ ನೀರಾವರಿ ಯೋಜನೆಗಳನ್ನು ಕೂಡಲೇ ಪೂರ್ಣಗೊಳಿಸಬೇಕು, ಹಾನಗಲ್ಲಿನ ಕೆಎಸ್ಆರ್ಟಿಸಿ ಘಟಕದ ಅವ್ಯವಸ್ಥೆ ಸರಿಪಡಿಸಬೇಕು ಎಂದು ಅಹಿಂದ ಹಾನಗಲ್ಲ ತಾಲೂಕು ಘಟಕದ ಪ್ರಧಾನ ಕಾರ್ಯಾಧ್ಯಕ್ಷ ದಾನಪ್ಪ ಗಂಟೇರ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಹಾವೇರಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಮುಂದಾಗಿ ಕಾಂಗ್ರೆಸ್ನ ನಾಲ್ವರು ಶಾಸಕರಾಗುವಂತೆ ಶ್ರಮಿಸಿದ ಮನೋಹರ ತಹಸೀಲ್ದಾರ್ಗೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು. ಈ ಮೂಲಕ ಹಾನಗಲ್ಲ ತಾಲೂಕಿನ ಅಭಿವೃದ್ಧಿಗೆ ಅನುವು ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.
ಬಸಾಪುರ ಏತ ನೀರಾವರಿ ಯೋಜನೆ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಇದಕ್ಕೆ ಬೇಕಾಗುವ ಅನುದಾನ ಬಿಡುಗಡೆಗೊಳಿಸಬೇಕು. ಹಾನಗಲ್ಲ ಕೆಎಸ್ಆರ್ಟಿಸಿ ಘಟಕ ಅವ್ಯವಸ್ಥೆಯ ಗೂಡಾಗಿದೆ. ಜಖಂಗೊಂಡ ಬಸ್ಸುಗಳಿವೆ. ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೇ ಹಾನಗಲ್ಲ ಕೆಎಸ್ಆರ್ಟಿಸಿ ಘಟಕದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ತಾಲೂಕು ಘಟಕದ ಅಧ್ಯಕ್ಷ ಹಾಶಂಪೀರ ಇನಾಮದಾರ, ಸದಸ್ಯರಾದ ರಾಜಕುಮಾರ ಸಿರಪಂತಿ, ಪರಶುರಾಮ ಡೂಗನವರ, ಸಿದ್ದಪ್ಪ ಹಿರಗಪ್ಪನವರ, ಯುವರಾಜ ಕಾಳಣ್ಣನವರ, ಗುಡ್ಡಪ್ಪ ಹಂಚಿನಮನಿ, ಖಾಜಾ ಶಿರಗೋಡ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

