ಡಿಪ್ಲೋಮಾ ಕೋರ್ಸ್ಗೆ ಅರ್ಜಿ ಆಹ್ವಾನ
ಹಾವೇರಿ: ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 42 ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ 10 ಜೂನ್, 2013ರೊಳಗಾಗಿ ಅರ್ಜಿ ವ್ಯಾಸಂಗ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರು. 400ರಿಂದ ರು. 500ರ ವರೆಗೆ ಶಿಷ್ಯವೇತನ ನೀಡಲಾಗುವುದು. ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಕಲ್ಪಿಸಲಾಗುವುದು. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿ 1 ಜೂನ್, 2013ಕ್ಕೆ 15ರಿಂದ 23 ವರ್ಷದೊಳಗಿನರಾಗಿರಬೇಕು ಹಾಗೂ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15ರಿಂದ 25 ವರ್ಷದೊಳಗಿರಬೇಕು. ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೇಟಗೇರಿ(ಕರ್ನಾಟಕ)-22 ಅಭ್ಯರ್ಥಿಗಳು, ಎಸ್ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)-03, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು)-15, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಕಣ್ಣೂರ (ಕೇರಳ)-02 ಅಭ್ಯರ್ಥಿಗಳು ಒಟ್ಟು 42 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗೆ ಕರೆಯಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರವರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಆಡಳಿತ ಭವನ, ಸಿ ಬ್ಲಾಕ್, ಮೊದಲನೇ ಮಹಡಿ, ಹಾವೇರಿ (ದೇವಗಿರಿ)-591182. ದೂರವಾಣಿ-249050ಗೆ ಸಂಪರ್ಕಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

