ಹಾವೇರಿ

ಮನೋಹರ್‌ಗೆ ಸಚಿವ ಸ್ಥಾನಕ್ಕಾಗಿ ಚಂಡಿಕಾ ಹೋಮ, ವಸ್ತ್ರದಾನ

Published On :

ಹಾನಗಲ್ಲ: ಹಾನಗಲ್ಲ ವಿಧಾನಸಭಾ ಕ್ಷೇತ್ರದ ಶಾಸಕ ಮನೋಹರ ತಹಸೀಲ್ದಾರ್‌ಗೆ ಸಚಿವ ಸ್ಥಾನ ಸಿಗಲೆಂದು ಶ್ರೀಕ್ಷೇತ್ರ ಉಡುಪಿಯಲ್ಲಿ ಚಂಡಿಕಾ ಹೋಮ ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ದಲಿತರಿಗೆ ಕಾಂಗ್ರೆಸ್ ಯುವ ಮುಖಂಡ ದಿನೇಶ ಕುಲಕರ್ಣಿ ವಸ್ತ್ರದಾನ ಮಾಡಿದರು.
ಪಕ್ಷದ ಮುಖಂಡ ಘನಶ್ಯಾಮ ದೇಶಪಾಂಡೆ ಮಾತನಾಡಿ, ಶಾಸಕ ಮನೋಹರ ತಹಸೀಲ್ದಾರ್ ಅವರ ಹಿರಿತನ ಹಾಗೂ ಪಕ್ಷನಿಷ್ಠೆ ಗಮನಿಸಿ ಸಿದ್ಧರಾಮಯ್ಯ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಆಯ್ಕೆ ಮಾಡಬೇಕಾಗಿದೆ. ಈ ಬಗ್ಗೆ ಕಾಂಗ್ರೆಸ್ ವರಿಷ್ಠ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ಇದೆ ಎಂದರು.
ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ 9 ವರ್ಷಗಳ ಅನಂತರ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಿದ್ದು, ಮನೋಹರ ತಹಸೀಲ್ದಾರ್ ಹೆಸರಿಗೆ ಕಳಂಕ ಬಾರದ ರೀತಿಯಲ್ಲಿ ಪಕ್ಷಾತೀತವಾಗಿ ಜನತೆಗೆ ಸೇವೆ ಒದಗಿಸಲಾಗುವುದು. ಅರ್ಹ ಫಲಾನುಭವಿಗಳಿಗೆ ಫಲಾಪೇಕ್ಷೆ ಇಲ್ಲದೆ ಸರ್ಕಾರದ ಯೋಜನೆಗಳ ಪ್ರಯೋಜನ ತಲುಪಿಸಲಾಗುದು ಎಂದರು.
ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ನ್ಯಾಮತಿ, ಮುಖಂಡರಾದ ದಿನೇಶ ಕುಲಕರ್ಣಿ, ವಿದ್ಯಾಶಂಕರ ದೇಶಪಾಂಡೆ, ಶ್ರೀಕಾಂತ ನಾಡಿಗೇರ, ಕಿರಣ ಬಂಕನಾಳ, ಪ್ರಭು ಕಬ್ಬೂರ, ವೀರಭದ್ರ ಜಡೆಗೊಂಡರ, ಸತೀಶ ಮಸಾಲಜಿ, ರಮೇಶ ತೊಗರ್ಸಿ, ಮಾಲತೇಶ ಗುಂಡೆಗೌಳಿ, ಗಜಾನನ ಧೋಂಗಡೆ, ಜಾಫರ ಅತ್ತಾರ, ಶ್ರೀಕಾಂತ ಬಡಿಗೇರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.