ಪುರಸಭೆ ವರ್ತನೆಗೆ ಕಾಂಗ್ರೆಸ್ ಖಂಡನೆ
ಹಾನಗಲ್ಲ: ಕಳೆದ 15 ದಿನಗಳಿಂದ ಹಾನಗಲ್ಲ ಪುರಸಭಾ ಅಧಿಕಾರಿಗಳು ಪಟ್ಟಣದ ಜನತೆಗೆ ಕುಡಿಯುವ ನೀರನ್ನು ಸರಿಯಾಗಿ ಪೂರೈಸದಿರುವುದನ್ನು ಖಂಡಿಸಿ ಹಾಗೂ 7 ದಿನಕ್ಕೊಮ್ಮೆ ನೀರು ಪೂರೈಸುವುದಾಗಿ ಡಂಗುರ ಸಾರಿದ್ದನ್ನು ಖಂಡಿಸಿ, ಪುರಸಭೆ ಕಾಂಗ್ರೆಸ್ ಸದಸ್ಯರು ಮುಖ್ಯಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಮೇ 20ರಂದು ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ನಡೆದ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ನೂತನ ಶಾಸಕ ಮನೋಹರ ತಹಸೀಲ್ದಾರ್, ಪುರಸಭೆಯ ಅಧಿಕಾರಿಗಳು 7 ದಿನಕ್ಕೊಮ್ಮೆ ನೀರನ್ನು ಬಿಡುವುದಾಗಿ ಡಂಗುರ ಸಾರಿದ್ದನ್ನು ಖಂಡಿಸಿದರು. ನೂತನ ಸರ್ಕಾರಕ್ಕೆ ಮಸಿ ಬಳಿಯದಂತೆ 4 ದಿನಕ್ಕೊಮ್ಮೆ ನೀರು ಬಿಡುವಂತೆ ಆದೇಶಿಸಿದ್ದರು. ಅವರ ಆದೇಶವನ್ನೂ ಅಧಿಕಾರಿಗಳು ಪಾಲಿಸುತ್ತಿಲ್ಲ. ಅಲ್ಲದೇ ಪುರಸಭೆ ವ್ಯಾಪ್ತಿಯಲ್ಲಿ ಬರುವ 34 ಕೊಳವೆ ಬಾವಿಗಳು ಹಾಳಾಗಿವೆ. ಅವುಗಳನ್ನು ಕೂಡಲೇ ದುರಸ್ತಿಗೊಳಿಸಿ, ನೀರೆತ್ತಿ ಪಟ್ಟಣದ ಜನತೆಗೆ ಸರಿಯಾದ ಸಮಯಕ್ಕೆ ನೀರು ಪೂರೈಸುವಂತೆ ಪುರಸಭೆ ಕಾಂಗ್ರೆಸ್ ಸದಸ್ಯರು ಮುಖ್ಯಾಧಿಕಾರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭ ಪುರಸಭಾ ಸದಸ್ಯರಾದ ಎಸ್.ಪಿ. ಸುಣಗಾರ, ಎಂ.ಎಂ. ಖೇಣಿ, ಅಶೋಕ ಆರೇಗೊಪ್ಪ, ದಿಲ್ಶ್ಯಾನಬಾನು ಸಾರಬಾನ, ಪಿ.ಕೆ. ಪಾರಗಾಂವಕರ, ಘನಶ್ಯಾಮ ದೇಶಪಾಂಡೆ, ವಿದ್ಯಾಶಂಕರ ದೇಶಪಾಂಡೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

