ನಾಳೆ ಜೈಲ್ ಭರೋ ಚಳವಳಿ: ಕೇಲಗಾರ
ರಾಣಿಬೆನ್ನೂರು: ಕೇಂದ್ರದ ಯುಪಿಎ ಸರ್ಕಾರದ ಜನ ವಿರೋಧಿ ಆಡಳಿತ ಧೋರಣೆ ವಿರೋಧಿಸಿ ಮೇ 27ರಂದು ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ಜಿಲ್ಲಾ ಬಿಜೆಪಿ ಘಟಕ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿರುವ ಬಿಜೆಪಿ ಘಟಕಗಳ ಕಾರ್ಯಕರ್ತರು, ಜೈಲ್ ಭರೋ ಚಳವಳಿ ನಡೆಸುವುದಾಗಿ ತಾಲೂಕು ಬಿಜೆಪಿ ಅಧ್ಯಕ್ಷ ಡಾ ಬಸವರಾಜ ಕೇಲಗಾರ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಯುಪಿಎ ಸರ್ಕಾರ ದೇಶದ ಜನರಿಗೆ ದಿನಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸುವುದರೊಂದಿಗೆ ಜನವಿರೋಧಿ ಸರ್ಕಾರವಾಗಿ ಮಾರ್ಪಟ್ಟಿದ್ದು, ಪ್ರಧಾನಮಂತ್ರಿ ಮನಮೊಹನ ಸಿಂಗ್ ಅವರು ಕೂಡಲೆ ರಾಜಿನಾಮೆ ನೀಡಿ ಹೊಸ ಜನಾದೇಶಕ್ಕೆ ಮುಂದಾಗಬೇಕು ಎಂದರು.
ಕಳೆದ ನಾಲ್ಕು ವರ್ಷಗಳಲ್ಲಿ ಯುಪಿಎ ಸರ್ಕಾರ ನಡೆಸಿರುವ ಭ್ರಷ್ಟಾಚಾರಗಳಾದ ಕಲ್ಲಿದ್ದಲು ಹಗರಣ, 2 ಜಿ ಹಗರಣ, ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಹಗರಣ, ಗಡಿ ಸಮಸ್ಯೆ, 10 ಬಾರಿ ಪೆಟ್ರೋಲ್, ಡೀಸೆಲ್ ಏರಿಕೆ, ಆಹಾರ ಧಾನ್ಯ ಬೆಲೆ ಏರಿಕೆ, ರಾಜ್ಯದ ಜನತೆಗೆ ನೀಡಬೇಕಾಗಿರುವ ಅಹಾರ ಧಾನ್ಯ ಹಗರಣ ಸೇರಿದಂತೆ ಹಲವಾರು ಹಗರಣಗಳಿದ ಕೂಡಿರುವ ಕೇಂದ್ರದ ಯುಪಿಎ ಸರ್ಕಾರದ ವಿರುದ್ಧ ಮೇ 27ರಂದು ನಡೆಯುವ ಜೈಲ್ ಭರೋ ಚಳವಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಬರಬೇಕೆಂದು ಡಾ ಕೇಲಗಾರ ಹೇಳಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಂಜುನಾಥ ಓಲೇಕಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಜಂಬಗಿ,ನಗರಸಭಾ ಸದಸ್ಯ ಉಮೇಶ ಹೊನ್ನಾಳಿ, ವಿ.ಸಿ. ಪಾಟೀಲ, ಮೈತ್ರಾ ಹದಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

