ಸನಾತನ ಸಂಸ್ಕೃತಿ, ಮಾನವೀಯತೆ ಕುಸಿತ: ಶ್ರೀಗಳು
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಮೇ 29
ಭಾರತೀಯ ಸನಾತನ ಸಂಸ್ಕೃತಿ ಹಾಗೂ ಮಾನವೀಯತೆ ಮರೆಯಾಗುತ್ತಿದೆ ಎಂದು ಚಿತ್ರದುರ್ಗದ ಶ್ರೀ ಬಸವ ಮಡಿವಾಳ ಮಾಚಿದೇವ ಮಹಾಸ್ವಾಮಿಗಳು ಆತಂಕ ವ್ಯಕ್ತಪಡಿಸಿದರು.
ಬುಧವಾರ ಪಟ್ಟಣದ ಕುಂಬಾರ ಓಣಿಯಲ್ಲಿ ನಿರ್ಮಿಸಿದ ಶ್ರೀ ವೀರಘಂಟಿ ಮಡಿವಾಳ ಮಾಚಿದೇವ ದೇವಸ್ಥಾನ ಉದ್ಘಾಟನೆ ಹಾಗೂ ಮಾಚಿದೇವ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಜನತೆಯಲ್ಲಿ ಆಧ್ಯಾತ್ಮಿಕ ಮನೋಭಾವನೆ ಬೆಳಸುವುದು ಅತ್ಯಗತ್ಯವಾಗಿದೆ ಎಂದರು.
ಸಮಾಜದ ಜನತೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ. ಇಂದಿನ ವಿಜ್ಞಾನ-ತಂತ್ರಜ್ಞಾನ ಕಾಲದಲ್ಲಿ ಮನುಷ್ಯನ ಬದುಕು ಯಾಂತ್ರಿಕವಾಗುತ್ತಿದೆ. ಇದರಿಂದ ಮಾನಸಿಕ ತೊಳಲಾಟದಲ್ಲಿ ಬಳಲುವಂತಾಗಿದ್ದು, ಮಾನಸಿಕ ನೆಮ್ಮದಿಗೆ ದೇವಸ್ಥಾನಗಳು ಅತ್ಯಗತ್ಯವಾಗಿವೆ ಎಂದರು.
ಸಮಾಜದ ಪ್ರತಿಯೊಬ್ಬರೂ ಶರಣರ ತತ್ವಗಳನ್ನು ಅಳವಡಿಸಿಕೊಂಡು ಬದುಕಿದಾಗ ಮಾತ್ರ ಅರ್ಥ ಬರುತ್ತದೆ. ಈ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಅಳವಡಿಸುವುದರೊಂದಿಗೆ ಶರಣರ ತತ್ವಗಳನ್ನು ಪಾಲಿಸಲು ಸಲಹೆ ನೀಡುವಂತಾಗಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನ ಮಾತನಾಡಿ, ಆಧುನಿಕತೆ ಪರಿಣಾಮ ಭಕ್ತಿ ವಿಷಯದಲ್ಲಿ ಸ್ವಲ್ಪ ವ್ಯತ್ಯಾಸಗಳಾಗಿದ್ದರೂ ಇಡೀ ವಿಶ್ವವೇ ಧಾರ್ಮಿಕ ನಂಬಿಕೆ ಹಾಗೂ ಆಚರಣೆಗಳ ತಳಹದಿ ಮೇಲೆ ನಿಂತಿದೆ. ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ವಿದ್ಯೆ ಸಹಕಾರಿಯಾದರೇ ಧರ್ಮ ಆತನ ಬದುಕಿನ ದಿಕ್ಸೂಚಿಯಾಗಿದೆ. ಬಸವಾದಿ ಶರಣರ ಕಾಲದಲ್ಲಿಯೇ ಮಡಿವಾಳ ಮಾಚಿದೇವ ತಮ್ಮ ವಚನ ಸಾಹಿತ್ಯದ ಮೂಲಕ ಪೌರೋಹಿತ್ಯ ಶಾಹಿಯ ವಿರುದ್ಧ ಹೋರಾಟ ನಡೆಸುವ ಮೂಲಕ ಶೋಷಿತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ ಎಂದರು.
ಮಡಿವಾಳ ಸಮಾಜದ ಅಧ್ಯಕ್ಷ ಚನ್ನಬಸಪ್ಪ ಮಡಿವಾಳರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಸುರೇಶಗೌಡ, ಕೃಷಿಕ ಸಮಾಜದ ಅಧ್ಯಕ್ಷ ಗಂಗಣ್ಣ ಎಲಿ, ಪುರಸಭೆ ಸದಸ್ಯರಾದ ಬಸವರಾಜ ಛತ್ರದ, ಬಸವರಾಜ ಹಂಜಿ, ಸಮಾಜ ಮುಖಂಡರಾದ ಫಕ್ಕೀರಪ್ಪ ಮಡಿವಾಳರ, ಗಂಗಾಧರ ಮಡಿವಾಳರ, ದುರ್ಗಪ್ಪ ಮಡಿವಾಳರ, ಶೇಖಪ್ಪ ಮಡಿವಾಳರ, ಹನುಮಂತಪ್ಪ ಮಡಿವಾಳರ, ಮಾಲತೇಶ ಮಡಿವಾಳರ, ಗಂಗವ್ವ, ಹನುಮವ್ವ, ಮಂಜು, ದ್ಯಾಮಣ್ಣ ಮಡಿವಾಳರ, ಆಂಜನೇಯ, ಮಾಲತೇಶ, ನಾಗರಾಜ, ಮಹೇಶ, ದುರ್ಗಪ್ಪ, ಪ್ರಶಾಂತ, ಚಿಕ್ಕಪ್ಪ ಇದ್ದರು. ಗುತ್ತೆಪ್ಪ ಹಾವೇರಿ ಸ್ವಾಗತಿಸಿದರು. ಸದಾನಂದ ಮಡಿವಾಳರ ನಿರೂಪಿಸಿದರು. ಸಂಜು ಮಡಿವಾಳರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

