ಹಾವೇರಿ

ಇಂದಿನಿಂದ ಪೌರತ್ವ ತರಬೇತಿ ಶಿಬಿರ

Published On :

ಹಾನಗಲ್ಲ: ಇಲ್ಲಿನ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪೌರತ್ವ ತರಬೇತಿ ಶಿಬಿರ ಮೇ 31ರಿಂದ ಜೂನ್ 2ರವರೆಗೆ ನಡೆಯಲಿದೆ.
ಹುಬ್ಬಳ್ಳಿ ಮೂರುಸಾವಿರ ಮಠದ ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಶಿಬಿರ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10ಕ್ಕೆ ನಡೆಯುವ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಕುಮಾರೇಶ್ವರ ವಿದ್ಯಾವರ್ಧಕ ಟ್ರಸ್ಟ್ ಚೇರಮನ್ ಸಿ.ಎಂ. ಉದಾಸಿ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ಮಹ್ಮದ ಶರೀಫ ಹಾನಗಲ್ಲ, ಸಂಸ್ಥೆಯ ನಿರ್ದೇಶಕರುಗಳಾದ ಎನ್.ಜಿ. ಕುಂಬಾರಿ, ಜಿ.ಎಸ್. ಕೊಂಡೋಜಿ, ಪ್ರಾಚಾರ್ಯ ಎನ್.ಸದಾಶಿವಪ್ಪ ಪಾಲ್ಗೊಳ್ಳುವರು.
ಜೂ.1ರಂದು 10ಕ್ಕೆ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ನಂತರ ನ್ಯಾಯವಾದಿ ಶಾರದಾ ಕೊಪ್ಪದ ಅವರಿಂದ ಸಮಾಜ ನವನಿರ್ಮಾಣದಲ್ಲಿ ಮಹಿಳೆ ಪಾತ್ರ ಹಾಗೂ ಮಹಿಳಾ ಸಬಲೀಕರಣ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಜೂ. 2ರಂದು ಬೆಳಗ್ಗೆ 9.30ಕ್ಕೆ ನಡೆಯುವ ಸಮಾರೋಪದ ಅಧ್ಯಕ್ಷತೆಯನ್ನು ಸಂಸ್ಥೆ ನಿರ್ದೇಶಕ ಎನ್.ಜಿ. ಕುಂಬಾರಿ ವಹಿಸುವರು. ಮಂಗಳೂರಿನ ಡಾ. ಎನ್.ಚಂದ್ರಶೇಖರ, ಜಿ.ಎಸ್. ಕೊಂಡೋಜಿ, ಪ್ರಾಚಾರ್ಯ ಎನ್.ಸದಾಶಿವಪ್ಪ ಪಾಲ್ಗೊಳ್ಳುವರು.
ಪ್ರತಿದಿನ ಸಂಜೆ ಪ್ರಶಿಕ್ಷಣಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗುವವು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.