ಹಾವೇರಿ

ನಾಳೆ ಕಾಗಿನೆಲೆಗೆ ಸಿಎಂ

Published On :

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ. 2ರಂದು ಬೆಳಗ್ಗೆ 11.30ಕ್ಕೆ ಕಾಗಿನೆಲೆಯ ಕನಕ ಗುರುಪೀಠಕ್ಕೆ ಆಗಮಿಸಿ ದಾಸೋಹ ಭವನದ ಶಂಕುಸ್ಥಾಪನೆ ನೆರವೇರಿಸುವರೆಂದು ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿ ಅಶೋಕ ಖೇಣಿ ಅವರ ನೆರವಿನಿಂದ ನಿರ್ಮಾಣಗೊಂಡ ಶ್ರೀ ಮಾಳಿಂಗರಾಯ ವಿದ್ಯಾರ್ಥಿ ನಿಲಯದ ಉದ್ಘಾಟನೆಯನ್ನು ಖೇಣಿ ನೆರವೇರಿಸುವರು.
ಹರಿಹರ ಪಂಚಮಸಾಲಿ ಪೀಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಕೆ.ಆರ್.ನಗರ ಕನಕ ಗುರುಪೀಠದ ಶಾಖಾಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳು ನೇತೃತ್ವ ವಹಿಸುವರು. ತಿಂಥಣಿ ಶಾಖಾಮಠದ ಸಿದ್ಧರಮಾನಂದ ಮಾಹಾಸ್ವಾಮಿಗಳು, ಹೊಸದುರ್ಗ ಶಾಖಾಮಠದ ಈಶ್ವರಾನಂದ ಮಹಾಸ್ವಾಮಿಗಳು ಸಮ್ಮುಖ ವಹಿಸುವರು. ಸಿಎಂ, ಸಮಾಜದ ನೂತನ ಶಾಸಕರನ್ನು ಸನ್ಮಾನಿಸಲಾಗುವುದು. ಮುಖ್ಯ ಅತಿಥಿಯಾಗಿ ಸಲೀಂ ಅಹ್ಮದ್, ಕೆ.ಎಸ್. ಈಶ್ವರಪ್ಪ, ವಿಶ್ವನಾಥ, ಎಚ್.ಕೆ. ಪಾಟೀಲ, ಶಾಮನೂರು ಶಿವಶಂಕ್ರಪ್ಪ, ಸಂತೋಷ ಲಾಡ್, ಪಿ.ಟಿ. ಪರಮೇಶ್ವರ ನಾಯ್ಕ ಮತ್ತಿತರರು ಆಗಮಿಸುವರೆಂದು ಶ್ರೀಗಳು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.