ನಾಡಿನ ಕಲೆ-ಸಂಸ್ಕೃತಿ ರಕ್ಷಿಸೋಣ: ಬಣಕಾರ
ಹಿರೇಕೆರೂರು: ನಾಡಿನ ನೆಲ, ಜಲ, ಕಲೆ ಹಾಗೂ ಸಂಸ್ಕೃತಿಯ ರಕ್ಷಣೆಗೆ ಕನ್ನಡಿಗರು ಶ್ರಮಿಸಬೇಕು. ಕರ್ನಾಟಕ ಏಕೀಕರಣವಾಗಿ 57 ವರ್ಷಗಳು ಗತಿಸಿದರೂ ಸಮಸ್ಯೆಗಳು ಪರಿಹಾರ ಆಗದೇ ಇರುವುದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಜರುಗಿದ 57ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅವರು, ದೇಶ 1947ರಲ್ಲಿ ಸ್ವಾತಂತ್ರ್ಯ ಗಳಿಸಿತು. ಹರಿದು-ಹಂಚಿ ಹೋಗಿದ್ದ ಕನ್ನಡ ನಾಡು ಹೋರಾಟದ ಫಲವಾಗಿ 1956ರಲ್ಲಿ ಒಗ್ಗೂಡಿತು. ಆದರೂ ಗಡಿ ತಂಟೆಗಳು ಬಗೆಹರಿದಿಲ್ಲ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕರೂ ಅನುಷ್ಠಾನಗೊಳಿಸಿಲ್ಲ. ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿವೆ. ಮಕ್ಕಳಿಗೆ ಕನ್ನಡದಲ್ಲೇ ಶಿಕ್ಷಣ ಸಿಗಬೇಕೆಂದರು.
ತಹಸೀಲ್ದಾರ್ ಶಕುಂತಲಾ ಚೌಗುಲೆ ಧ್ವಜಾರೋಹಣ ನೆರವೇರಿಸಿ, ಸರೋಜಿನಿ ಮಹಿಷಿ ವರದಿ ಅನುಷ್ಠಾನ ಆಗಬೇಕೆಂದರು. ತಾಪಂ ಅಧ್ಯಕ್ಷೆ ರೇಣುಕಮ್ಮ ಚಲುವಾದಿ, ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಗಾಳಿ, ಪಪಂ ಅಧ್ಯಕ್ಷೆ ಶಿವಲೀಲಾ ಎಸ್.ಆರ್., ಉಪಾಧ್ಯಕ್ಷ ಮಹೇಂದ್ರ ಬಡಳ್ಳಿ, ಕಸಾಪ ತಾಲೂಕು ಅಧ್ಯಕ್ಷ ಎಸ್.ಪಿ. ಗೌಡರ, ಜಿಪಂ ಸದಸ್ಯೆ ಬಸಮ್ಮ ಅಬಲೂರ, ಸಹಕಾರಿ ಧುರೀಣ ಎಸ್.ಎಸ್. ಪಾಟೀಲ, ಸಾಹಿತಿ ಭೋಜರಾಜ ಪಾಟೀಲ, ಕರವೇ ಜಿಲ್ಲಾಧ್ಯಕ್ಷ ಕರಬಸಯ್ಯ ಬಸರಿಹಳ್ಳಿಮಠ, ತಾಲೂಕಾಧ್ಯಕ್ಷ ಗಿರೀಶ ಬಾರ್ಕಿ, ಚಂದ್ರು ಅಣ್ಣಪ್ಪನವರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಅನಂದ, ತಾಪಂ ಇಒ ಡಿ.ಎ. ಜನವಾಡ ಇದ್ದರು. ಜಿ.ಬಿ. ಶಂಕರ ರಾವ್ ವೃತ್ತದಲ್ಲಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆಗೆ ಶಾಸಕರು ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

