ಸುದ್ದಿ ಸಂಕ್ಷೇಪ
ಸೌಜನ್ಯಾ ಪ್ರಕರಣ ಸಿಬಿಐಗೆ ವಹಿಸಿ: ಎಸ್ಎಫ್ಐ
ಹಾವೇರಿ: ಧರ್ಮಸ್ಥಳ ನಿವಾಸಿ, ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ ಭಾರತ ವಿದ್ಯಾರ್ಥಿ ಫೆಡರೇಷನ್, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಹಾಗೂ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಎಸ್ಎಫ್ಐ ಬಲವಾಗಿ ಖಂಡಿಸಿದೆ. ಸರ್ಕಾರ ಮತ್ತು ಪ್ರಭಾವಿ ವ್ಯಕ್ತಿಗಳ ಕುಮ್ಮಕ್ಕಿನಿಂದ ಪ್ರತಿಭಟನಾಕಾರರನ್ನು ಬಂಧಿಸಿರುವುದು ಖಂಡನೀಯ. ದೇಶದಲ್ಲಿ ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ-ಕೊಲೆ ಪ್ರಕರಣಗಳು ಹೆಚ್ಚುತ್ತಲೇ ಇವೆ ಎಂದೂ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಕೆಲವು ಪ್ರಕರಣಗಳಲ್ಲಿ ಪ್ರಭಾವಿಗಳ ಕೈವಾಡದಿಂದ ನಿಜವಾದ ಆರೋಪಿಗಳು ಪತ್ತೆಯಾಗುವುದೇ ಇಲ್ಲ. ಇದೂ ಅತ್ಯಾಚಾರದಂತಹ ಘಟನೆಗಳು ಹೆಚ್ಚುವುದಕ್ಕೆ ಕಾರಣವಾಗುತ್ತಿದೆ. ಸರ್ಕಾರಗಳು ತಕ್ಷಣ ಎಚ್ಚೆತ್ತುಕೊಂಡು ನೊಂದವರಿಗೆ ನ್ಯಾಯ ಒದಗಿಸಬೇಕೆಂದು ಎಸ್ಎಫ್ಐ ಆಗ್ರಹಿಸಿದೆ. ಸೌಜನ್ಯಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಬಂಧಿತ ಕಾರ್ಯಕರ್ತರ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ನಾಡಿನ ವಿದ್ಯಾರ್ಥಿ ಸಮುದಾಯ, ಯುವಜನ ಸಂಘಟನೆಗಳು ಮತ್ತು ಮಹಿಳಾ ಸಂಘಟನೆಗಳೊಂದಿಗೆ ರಾಜ್ಯವ್ಯಾಪಿ ಹೋರಾಟ ನಡೆಸಲಿದೆ ಎಂದೂ ಜಿಲ್ಲಾಧ್ಯಕ್ಷ ಬಸವರಾಜ ಪ್ರಜಾರ, ವಿದ್ಯಾರ್ಥಿನಿಯರ ಉಪಸಮಿತಿ ರಾಜ್ಯ ಸಂಚಾಲಕಿ ರೇಣುಕಾ ಕಹಾರ, ಜ್ಯೋತಿ ದೊಡ್ಡಮನಿ, ಶಾಂತಾ, ಸುಭಾಸ ಎಂ., ಮಲ್ಲೇಶ ಗೋಟನವರ, ವಿನಾಯಕ ವೈ., ಇಮಾಮ್ ನದಾಫ್, ಚಂದ್ರು ಪೂಜಾರಿ ಎಚ್ಚರಿಸಿದ್ದಾರೆ.
ಬಿಜೆಪಿಗೆ ಹಿಟ್ನಳ್ಳಿ ಆಯ್ಕೆ
ಹಾವೇರಿ: ಬಿಜೆಪಿ ಹಾವೇರಿ ಘಟಕದ ನೂತನ ವಕ್ತಾರರನ್ನಾಗಿ ಪ್ರಭು ಹಿಟ್ನಳ್ಳಿ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಭೋಜರಾಜ ಕರೂದಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ ಜಾಗೃತಿ ವೇದಿಕೆಗೆ ಎಂ.ಡಿ. ಹಡಪದ ಆಯ್ಕೆ
ಶಿಗ್ಗಾಂವಿ: ತಾಲೂಕಿನ ಬೆಳವಲಕೊಪ್ಪ ಗ್ರಾಮದ ಮಹದೇವ ಡಿ. ಹಡಪದ ಅವರು ಕನ್ನಡ ಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಅಧ್ಯಕ್ಷ ಕೆ. ಮಂಜುನಾಥ (ದೇವ) ಅವರ ಸೂಚನೆ ಮೇರೆಗೆ ಜಿಲ್ಲಾ ಅಧ್ಯಕ್ಷ ಬಸವರಾಜ ಫ. ದೊಡಮನಿ ಈ ಆದೇಶ ಹೊರಡಿಸಿದ್ದಾರೆ.
ಮಲ್ಲಗಂಬದಲ್ಲಿ ಸಾಧನೆ
ಶಿಗ್ಗಾಂವಿ: ತಾಲೂಕಿನ ಕಾಮನಹಳ್ಳಿ ಗ್ರಾಮದ ಕುಮಾರ ಈರಣ್ಣ ರಾಮಪ್ಪ ವಾಲಿಕಾರ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ಮಲ್ಲಗಂಬ ಸ್ಪರ್ಧೆಯಲ್ಲಿ ವಿಜೇತರಾಗಿ, ಅಂತರ ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆ ಬಗ್ಗೆ ಗ್ರಾಮಸ್ಥರು, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

