ಹಾವೇರಿ

ಸಂಧಾನ ಮೂಲಕ ಪ್ರಕರಣ ಇತ್ಯರ್ಥ

Published On :

ಹಾವೇರಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಗೊಳಿಸಲು ಉದ್ದೇಶಿಸಿದ್ದು, ರಾಜಿ ಸಂಧಾನದ ಮೂಲಕ (ಮೆಗಾ ಲೋಕ್ ಅದಾಲತ್) ಇತ್ಯರ್ಥಗೊಳಿಸಲು ನ. 23ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಎಸ್. ಪಾಟೀಲ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ವ್ಯಾಜ್ಯಗಳನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥ ಮಾಡಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ವಕೀಲರ ಮುಖಾಂತರವೇ ಭಾಗವಹಿಸಬೇಕು ಎನ್ನುವ ನಿಯಮವಿಲ್ಲ. ಕಕ್ಷಿಗಾರರೇ ನೇರವಾಗಿ ಭಾಗವಹಿಸಬಹುದು. ಈ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು. ಸೌಹಾರ್ದಯುತವಾಗಿ ಪ್ರಕರಣವು ಇತ್ಯರ್ಥ ಆಗುವುದರಿಂದ ಬಾಂಧವ್ಯವೂ ಉಳಿಯುತ್ತದೆ ಎಂದರು.
ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳನ್ನೂ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಮಾಡಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನೂ ಪೂರ್ಣವಾಗಿ ಮರುಪಾವತಿಸಲಾಗುವುದು. ಕಡಿಮೆ ಖರ್ಚಿನಲ್ಲಿ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿಕೊಳ್ಳಲು ಇದು ಉತ್ತಮ ಅವಕಾಶ. ಸದುಪಯೋಗ ಮಾಡಿಕೊಳ್ಳಿ ಎಂದರು. ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಆರ್. ರೇಣಕೆ, ರಾಣಿಬೆನ್ನೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಬಿ. ಆಸೋಡೆ, ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.