ಹಾವೇರಿ

ಕೆರೆ ತುಂಬಿಸಲು ಕ್ರಮ: ಶಿವಣ್ಣನವರ

Published On :

ರಾಣಿಬೆನ್ನೂರು: ಬ್ಯಾಡಗಿ ಕ್ಷೇತ್ರದ ಕೆರೆಗಳಿಗೆ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಿಂದ ನೀರು ತುಂಬಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಹನುಮಾಪುರ ಕೆರೆಗೆ ಬಾಗಿನ ಅರ್ಪಿಸಿ, ಹನುಮಾಪುರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹ ಕೇಂದ್ರ ಉದ್ಘಾಟಿಸಿದ ಅವರು, ರಾಣಿಬೆನ್ನೂರು ತಾಲೂಕಿನ 26 ಹಳ್ಳಿಗಳು ಬ್ಯಾಡಗಿ ಕ್ಷೇತ್ರಕ್ಕೆ ಒಳಪಟ್ಟಿದ್ದು, ಕೆರೆಗಳಿಗೆ ತುಂಗಾ ಮೇಲ್ದಂಡೆ ಕಾಲುವೆಯಿಂದ ನೀರು ತುಂಬಿಸಿದರೆ, ಅಂತರ್ಜಲ ವೃದ್ಧಿಸುತ್ತದೆ. ಬೆಳೆಗಳಿಗೆ ಅನುಕೂಲವಾಗುತ್ತದೆ. ಬೇಸಿಗೆಯಲ್ಲಿ ಕುಡಿಯಲು, ದನಕರುಗಳ ಬಳಕೆಗೂ ಸಿಗುತ್ತದೆ. ಪಂಚಾಯತ್ ಮಟ್ಟದಲ್ಲೂ ಬೋರ್‌ವೆಲ್‌ಗಳ ಹೆಚ್ಚಳಕ್ಕೆ ಶ್ರಮಿಸಲಾಗುವುದು ಎಂದರು.
ತಾಪಂ ಮಾಜಿ ಅಧ್ಯಕ್ಷ ಬಸವರಾಜ ಸವಣೂರು, ಗ್ರಾಪಂ ಮಾಜಿ ಅಧ್ಯಕ್ಷ ಗುಡ್ಡಪ್ಪ ಶಿರೂರು, ನಿಡ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಫ್. ಅಕ್ಕಿ, ಧಾರವಾಡ ಜಿಲ್ಲಾ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿ ಎನ್.ಎಸ್. ಕುಮ್ಮೂರು, ಮಹಮ್ಮದ ಎಲಿಗಾರ ಮಾತನಾಡಿದರು. ಗುಡ್ಡಪ್ಪ ನಾಡರ, ಹೊನ್ನಪ್ಪ ಮಾಳಪ್ಪನವರ, ಗೋಪಾಲ ಅಂತರವಳ್ಳಿ, ಹೊನ್ನಪ್ಪ ಕೊರಚರ, ಬಸಪ್ಪ ಡೊಳ್ಳಿನ, ತಾಪಂ ಸದಸ್ಯೆ ಶಿವಕ್ಕ ಡೊಳ್ಳಿನ, ಮಲ್ಲಪ್ಪ ಕಟಗಿ, ಹನುಮಪ್ಪ ಆನ್ವೇರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.