ಹಾವೇರಿ

ಬೆಲೆ ಏರಿಕೆ ಕಾಂಗ್ರೆಸ್ ಸಾಧನೆ: ಸೋಮಣ್ಣ

Published On :

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ನ. 8
ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸಿದ್ದು ಕಾಂಗ್ರೆಸ್ ಸರ್ಕಾರದ ಸಾಧನೆ. ಇದರಿಂದ ನಾಡಿನ ಜನತೆ ಹಿಡಿಶಾಪ ಹಾಕುವಂತಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೋಮಣ್ಣ ಬೇವಿನಮರದ ಹೇಳಿದರು.
ತಾಲೂಕಿನ ಬಂಕಾಪುರ ಪಟ್ಟಣದ ಖಣಜಗೇರಿ ಈಶ್ವರ ದೇವಸ್ಥಾನದ ಆವರಣದಲ್ಲಿ ರಾಣಾ ಪ್ರತಾಪಸಿಂಗ್ ಯುವಕ ಮಂಡಳದ ವತಿಯಿಂದ ಸನ್ಮಾನ ಸ್ವೀಕರಿಸಿದ ಅವರು, ಸಾಕಷ್ಟು ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಜನರನ್ನು ಬಡವರನ್ನಾಗಿಸಿದೆ. ದೇಶದ ಆರ್ಥಿಕತೆ ಕುಸಿಯುವಂತೆ ಮಾಡಿದೆ. ಈ ವರ್ಷವೇ 10ಕ್ಕೂ ಹೆಚ್ಚು ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಸಿ, ಬಡವರ ಗಾಯದ ಮೇಲೆ ಬರೆ ಎಳೆದಿದೆ ಎಂದು ದೂರಿದರು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನ. 17ರಂದು ಬೆಂಗಳೂರಿಗೆ ಆಗಮಿಸಲಿದ್ದು, ಅವರ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ ನಡೆದಿದೆ. ಅವರ ರ್ಯಾಲಿಗೆ ಸದ್ಯ 3 ಲಕ್ಷ ಜನರು ನೋಂದಣಿ ಮಾಡಿದ್ದು, 8ರಿಂದ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದರು.
ರಾಣಾ ಪ್ರತಾಪಸಿಂಗ್ ಯುವಕ ಮಂಡಳದ ಅಧ್ಯಕ್ಷ ಮಾಲತೇಶ ಬಾಬುಸಿಂಗ್‌ನವರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಬಸವರಾಜ ನಾರಾಯಣಪುರ, ಉಪಾಧ್ಯಕ್ಷ ಸಾಗರ ಮಲ್ಲೂರ, ಡಾ೤ ಬಿ.ಎಚ್. ವೀರಣ್ಣ, ಪುರಸಭೆ ಸದಸ್ಯೆ ಲಕ್ಷ್ಮೀ ವೆಂಕಣ್ಣವರ, ಸುನೀತಾ ಬೆಟಗೇರಿ, ಗುಡ್ಡಪ್ಪ ಮತ್ತೂರ, ಸೋಮಶೇಖರ ಗೌರಿಮಠ, ಅಶೋಕ ಪಟ್ಟಣಶೆಟ್ಟರ, ಬಸಣ್ಣ ಮರಳಿ, ರಮೇಶ ಶಿರೋಳ ಉಪಸ್ಥಿತರಿದ್ದರು. ಲಿಂಗರಾಜ ಹಳವಳ್ಳಿ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.