ಹಾವೇರಿ

ಪ್ರಾರ್ಥನಾ ಮಂದಿರ ತೆರವಿಗೆ ಆಗ್ರಹ

Published On :

ಹಾನಗಲ್ಲ: ಪಟ್ಟಣದ ಹೊರಭಾಗದಲ್ಲಿರುವ ನವನಗರ ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಪ್ರಾರ್ಥನಾ ಮಂದಿರ ಕಟ್ಟಡವನ್ನು ಕೂಡಲೇ ತೆರವುಗೊಳಿಸಬೇಕೆಂದು ಒತ್ತಾಯಿಸಿ ಸಾರ್ವಜನಿಕರು ಶುಕ್ರವಾರ ತಹಸೀಲ್ದಾರ್‌ಗೆ ಮನವಿ ಅರ್ಪಿಸಿದ್ದಾರೆ.
ಹಾನಗಲ್ಲ ಪುರಸಭೆ ವ್ಯಾಪ್ತಿಯ ನವನಗರದಲ್ಲಿರುವ ಕೆರೆ ಪಕ್ಕದಲ್ಲಿ ಅನಧಿಕೃತವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಲಾಗುತ್ತಿದೆ. ಈ ಜಾಗೆ ಪುರಸಭೆ ಆಸ್ತಿ. ಇದರಲ್ಲಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಿಸುತ್ತಿರುವುದು ಕಾನೂನುಬಾಹಿರ. ಸರ್ಕಾರಿ ಆಸ್ತಿಯ ದುರುಪಯೋಗವೂ ಆಗಿದೆ. ಹೀಗಾಗಿ, ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿ ತಕ್ಷಣ ಕಟ್ಟಡ ತೆರವುಗೊಳಿಸಬೇಕೆಂದು ಮನವಿ ಮಾಡಲಾಗಿದೆ. ತಹಸೀಲ್ದಾರ್ ಡಾ೤ ನಾಗೇಂದ್ರ ಹೊನ್ನಳ್ಳಿ ಪ್ರತಿಕ್ರಿಯಿಸಿ, ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳ ಮೇಲೆ ತೀವ್ರ ನಿಗಾ ವಹಿಸಲಾಗುವುದು, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಶಾಂತಿ ಕಾಪಾಡಲು ಸಹಕರಿಸಿ ಎಂದರು.
ಪ್ರಮುಖರಾದ ಈಶ್ವರ ನಿಂಗೋಜಿ, ರವಿಚಂದ್ರ ಪುರೋಹಿತ, ಚೇತನ ಬೆಂಡಿಗೇರಿ, ಈಶ್ವರ ತೋರಗಲ್ಲ, ಮನೋಜ ಕಲಾಲ, ಮಾಲತೇಶ ತುಮರಿಕೊಪ್ಪ, ವಿಶ್ವ ಬೇದ್ರೆ, ಮಾಲತೇಶ ಸಾತಪತಿ, ಮಾಲತೇಶ ಲಾತೂರಿ, ನಾರಾಯಣ ಬೋವೇರ, ನಿರಂಜನ ವಿ.ಎಸ್. ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.