ನಾಳೆ ಕೆಜೆಪಿ ಪ್ರತಿಭಟನೆ
ಹಾವೇರಿ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ದ್ವಂದ್ವ ನೀತಿಯ ಅವೈಜ್ಞಾನಿಕ ಯೋಜನೆಗಳ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಜನತಾ ಪಕ್ಷದ ಜಿಲ್ಲಾ ಘಟಕ ನ. 11ರಂದು ಬೃಹತ್ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡೆಸುತ್ತಿರುವ ಅಹೋರಾತ್ರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆ ನೇತೃತ್ವವನ್ನು ಮಾಜಿ ಸಚಿವ ಸಿ.ಎಂ. ಉದಾಸಿ ವಹಿಸಿಕೊಳ್ಳಲಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಎಂ.ಜಿ. ರಸ್ತೆ, ಗಾಂಧಿ ವೃತ್ತ, ಜೆ.ಪಿ. ವೃತ್ತ, ಬಸ್ ನಿಲ್ದಾಣ ಎದುರಿನ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಿದ್ದಪ್ಪ ಹೊಸಮನಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ, ರಸ್ತೆ ತಡೆ ನಡೆಸಲಾಗುವುದು.
ಅನಂತರ ಮಹಾದೇವ ಮೈಲಾರ ವೃತ್ತದಲ್ಲಿ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮೈಲಪ್ಪ ಗುಡಗೂರು, ಶಾಸಕ ಯು.ಬಿ. ಬಣಕಾರ, ಮಾಜಿ ಶಾಸಕರಾದ ನೆಹರೂ ಓಲೇಕಾರ, ಶಿವರಾಜ ಸಜ್ಜನರ, ಜಿ. ಶಿವಣ್ಣ, ಜಿಪಂ, ತಾಪಂ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಜಿಲ್ಲಾ ವಕ್ತಾರ ಸುರೇಶ ಹೊಸಮನಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

