ಓಲೈಕೆ ಪ್ರಜಾಪ್ರಭುತ್ವಕ್ಕೆ ವಿರುದ್ಧ: ಬಳ್ಳಾರಿ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ನ. 9
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಓಲೈಕೆ ರಾಜಕಾರಣ ಸ್ಥಗಿತಗೊಳ್ಳಬೇಕು. ಅಂದಾಗ ಮಾತ್ರ ಸಾಮಾಜಿಕ ನ್ಯಾಯ ದೊರಕಿಸಬಹುದು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ದೇಶಕ್ಕೆ ಅಭಿವೃದ್ಧಿಯಿಂದಲೇ ವಿಶ್ವಕ್ಕೆ ಪರಿಚಿತರಾದ ನರೇಂದ್ರ ಮೋದಿ ಪ್ರಧಾನಿ ಆಗಬೇಕಿರುವುದು ಅನಿವಾರ್ಯ ಎಂದು ಜಿಪಂ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಬಿಜೆಪಿ ಯುವ ಮೋರ್ಚಾ ತಾಲೂಕು ಘಟಕ ನರೇಂದ್ರ ಮೋದಿ ರ್ಯಾಲಿಯನ್ನು ಬೆಂಬಲಿಸಿ ಬಿಜೆಪಿ ಯುವ ಮೋರ್ಚಾ ಘಟಕ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಬೈಕ್ ರ್ಯಾಲಿ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವಕ್ಕೆ ವಿರುದ್ಧ
ಒಬ್ಬ ಅತ್ಯುತ್ತಮ ಅರ್ಥಶಾಸ್ತ್ರಜ್ಞ 10 ವರ್ಷಗಳ ಕಾಲ ಪ್ರಧಾನಿಯಾಗಿದ್ದರೂ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗಿಲ್ಲ ಎಂಬುದು ದುರಂತವೇ ಸರಿ. ಓಲೈಕೆ ರಾಜಕಾರಣ ನಡೆಸುತ್ತಿರುವ ಕಾಂಗ್ರೆಸ್, ಅಭಿವೃದ್ಧಿಪರ ಎನ್ನುವುದಕ್ಕಿಂತ ಅರ್ಥವಿಲ್ಲದ ಜನಪ್ರಿಯ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ಸಂಕಷ್ಟಕ್ಕೀಡು ಮಾಡಿದೆ. ಒಂದು ವರ್ಗದ ಜನರನ್ನು ಓಲೈಸುವುದರಿಂದ ಸಮಾಜ ವಿಘಟನೆಗೆ ನಾಂದಿಯಾಗುತ್ತದೆ. ಮೋದಿ ರ್ಯಾಲಿಗಳಲ್ಲಿ ಬಾಂಬ್ ಸಿಡಿಸುವ ಮೂಲಕ ಭಯದ ವಾತಾವರಣ ನಿರ್ಮಿಸಿ, ಮೋದಿ ವರ್ಚಸ್ಸು ಕುಗ್ಗಿಸಲು ವ್ಯವಸ್ಥಿತ ಹುನ್ನಾರ ನಡೆದಿದೆ. ಇಂತಹ ಬೆದರಿಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿವೆ ಎಂದರು.
ಮೋದಿ ಪ್ರಧಾನಿಯಾಗೋದು ನಿಶ್ಚಿತ
ಶಂಕರಗೌಡ ಪಾಟೀಲ ಮತನಾಡಿ, ಪಟ್ಟಭದ್ರ ಹಿತಾಸಕ್ತಿಗಳ ಯಾವುದೇ ಬೆದರಿಕೆಗಳು ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಮೋದಿಯನ್ನು ಪ್ರಧಾನಿಯನ್ನಾಗಿ ಮಾಡಲು ದೇಶದ ಜನರು ಮಾನಸಿಕವಾಗಿ ಸಿದ್ಧವಾಗಿದ್ದಾರೆ. ರ್ಯಾಲಿಗಳಲ್ಲಿ ಜನ ಸ್ವಪ್ರೇರಣೆಯಿಂದ ಪಾಲ್ಗೊಳ್ಳುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.
ಕೇಂದ್ರ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ. ಸಮನ್ವಯದ ಕೊರತೆಯಿಂದ ಕಾಂಗ್ರೆಸ್‌ನಲ್ಲೇ ವಿಭಿನ್ನ ಅಭಿಪ್ರಾಯಗಳು ಮೂಡಿಬರುತ್ತಿವೆ. ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ನ. 17ರಂದು ಬೆಂಗಳೂರಿನಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಸ್ವಯಂಪ್ರೇರಣೆಯಿಂದ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ತಾಲೂಕಾಧ್ಯಕ್ಷ ರಾಮಣ್ಣ ಉಕ್ಕುಂದ, ಮಲ್ಲಿಕಾರ್ಜುನ ದೊಡ್ಮನಿ, ಯುವ ಮೋರ್ಚಾ ತಾಲೂಕಾಧ್ಯಕ್ಷ ವಿಜಯಭರತ್ ಬಳ್ಳಾರಿ, ಜಿಲ್ಲಾ ಪಾಧ್ಯಕ್ಷ ಸುರೇಶ ಚಲವಾದಿ, ಬಾಲಚಂದ್ರಗೌಡ ಪಾಟೀಲ, ಬಸವರಾಜ ಹಲಗೇರಿ, ಯಲ್ಲಪ್ಪ ಕುಡುಪಲಿ, ವಿನಾಯಕ ಕಂಬಳಿ, ವೀರಭದ್ರಗೌಡ ಹೊಂಬರಡಿ, ಪಾಂಡುರಂಗ ಸುತಾರ, ಮಂಜು ಜಾಧವ, ರೋಹಿತ್ ರಾಯ್ಕರ್, ಮಂಜುನಾಥ ಕೋಡಿಹಳ್ಳಿ, ಸಂಜು ಮಡಿವಾಳರ, ಶಿವಶಂಕರ ಮಾಮನಿ, ಪಂಚಾಕ್ಷರಿ ಬನಪ್ಪನವರ, ಮಂಜುನಾಥ ಪೂಜಾರ ಉಪಸ್ಥಿತರಿದ್ದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಓಲೈಕೆ ರಾಜಕಾರಣ ಸ್ಥಗಿತಗೊಳ್ಳಬೇಕು. ಅಂದಾಗ ಮಾತ್ರ ಸಾಮಾಜಿಕ ನ್ಯಾಯ ದೊರಕಿಸಬಹುದು. ಒಬ್ಬ ಅತ್ಯುತ್ತಮ ಅರ್ಥಶಾಸ್ತ್ರಜ್ಞ 10 ವರ್ಷಗಳ ಕಾಲ ಪ್ರಧಾನಿಯಾಗಿದ್ದರೂ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗಿಲ್ಲ ಎಂಬುದು ದುರಂತವೇ ಸರಿ. ಓಲೈಕೆ ರಾಜಕಾರಣ ನಡೆಸುತ್ತಿರುವ ಕಾಂಗ್ರೆಸ್, ಅಭಿವೃದ್ಧಿಪರ ಎನ್ನುವುದಕ್ಕಿಂತ ಅರ್ಥವಿಲ್ಲದ ಜನಪ್ರಿಯ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ಸಂಕಷ್ಟಕ್ಕೀಡು ಮಾಡಿದೆ. ಒಂದು ವರ್ಗದ ಜನರನ್ನು ಓಲೈಸುವುದರಿಂದ ಸಮಾಜ ವಿಘಟನೆಗೆ ನಾಂದಿಯಾಗುತ್ತದೆ.
- ವಿರೂಪಾಕ್ಷಪ್ಪ ಬಳ್ಳಾರಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

