ಹಾವೇರಿ

ಕೆಸಿಸಿ ಬ್ಯಾಂಕ್‌ಗೆ ಕೊಟ್ರೇಶ್ ಆಯ್ಕೆ

Published On :

ಹಾವೇರಿ: ಧಾರವಾಡದ ಕೆಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಾವೇರಿಯ ವ್ಯವಸಾಯ ಸೇವಾ ಸಹಕಾರಿ ಸೊಸೈಟಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೊಟ್ರೇಶ ಆರ್. ಬಸೆಗಣ್ಣಿ ಗೆಲವು ಸಾಧಿಸಿದ್ದಾರೆ.
ಕೊಟ್ರೇಶ್ ಅವರು ತಮ್ಮ ಪ್ರತಿಸ್ಪರ್ಧಿ ಮೃತ್ಯುಂಜಯ ಯಲಿಗಾರ ಅವರನ್ನು 14 ಮತಗಳ ಅಂತರದಿಂದ ಸೋಲಿಸಿ ಗೆಲುವಿನ ನಗೆ ಬೀರಿದರು. ಭಾನುವಾರ ಧಾರವಾಡದ ಕೆಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಾವೇರಿ ತಾಲೂಕಿನ ವಿಎಸ್‌ಎಸ್ ಬ್ಯಾಂಕಿನ 33 ಮತಗಳ ಪೈಕಿ ಕೊಟ್ರೇಶ್ 24 ಮತಗಳನ್ನು ಪಡೆದರು. ಮೃತ್ಯಂಜಯ ಯಲಿಗಾರ 7 ಹಾಗೂ ಮತ್ತೋರ್ವ ಅಭ್ಯರ್ಥಿ ಕುರುವಟ್ಟಿಗೌಡರ 2 ಮತಗಳನ್ನು ಪಡೆದರು.
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ, ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ನಗರಸಭೆ ಅಧ್ಯಕ್ಷ ಐ.ಯು. ಪಠಾಣ, ಕಾಂಗ್ರೆಸ್ ತಾಲೂಕಾಧ್ಯಕ್ಷ ಎಂ.ಎಂ. ಹಿರೇಮಠ, ನಗರಾಧ್ಯಕ್ಷ ಕೆ.ಎಸ್. ಪುರದ, ಸಂಜಯಕುಮಾರ ನೀರಲಗಿ, ರಮೇಶ ಕಡಕೋಳ, ಮುಖಂಡರಾದ ಎಸ್.ಎಫ್.ಎನ್. ಗಾಜಿಗೌಡರ, ಜಗದೀಶ ಬಸಗಣ್ಣಿ, ಜೆ.ಡಿ. ಬೆಟಗೇರಿ ಇತರರು ಕೆಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಕೊಟ್ರೇಶ್ ಅವರಿಗೆ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.