ಆಂಜನಪ್ಪ ಜಿಪಂ ಸಿಇಒ
ಹಾವೇರಿ: ಹಾವೇರಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆ.ಬಿ. ಆಂಜನಪ್ಪ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಕೊಡಗು ಜಿಪಂ ಸಿಇಒ ಆಗಿದ್ದರು. ಇದುವರೆಗೆ ಸಿಇಒ ಆಗಿದ್ದ ಉಮೇಶ ಕುಸುಗಲ್ಲ ಹುಬ್ಬಳ್ಳಿ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.
ಶಿಕ್ಷಕರಿಗೆ ಸ್ಪರ್ಧೆ ಇಂದು
ಹಾನಗಲ್ಲ: ತಾಲೂಕಿನ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಸಹಪಠ್ಯ ಚಟುವಟಿಕೆ ಸ್ಪರ್ಧೆ ನ. 12ರಂದು ಇಲ್ಲಿನ ಬಿಆರ್ಸಿ ಕಚೇರಿಯಲ್ಲಿ ನಡೆಯಲಿದೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ನಡೆಯುವ ಸ್ಪರ್ಧೆಗಳಲ್ಲಿ ತಾಲೂಕಿನ ಶಿಕ್ಷಕರು ಪಾಲ್ಗೊಳ್ಳಲು ಅವಕಾಶವಿದೆ. ಶಿಕ್ಷಕರಿಗಾಗಿ ಗಾಯನ, ಆಶುಭಾಷಣ, ಪ್ರಬಂಧ, ಸ್ಥಳದಲ್ಲೇ ಪಾಠೋಪಕರಣ ಸಿದ್ಧತಾ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ. ಆಸಕ್ತರು ದೈಹಿಕ ಪರಿವೀಕ್ಷಕ ಎಸ್.ಎಫ್. ಕೆಂಗಮ್ಮನವರ ಅವರಲ್ಲಿ ಹೆಸರು ನೋಂದಾಯಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭು ಸುಣಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಪಂಜಿನ ಮೆರವಣಿಗೆ
ಹಾನಗಲ್ಲ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಕಾರ್ಯಕ್ರಮದ ಅಂಗವಾಗಿ ನ. 12ರಂದು ಸಂಜೆ 6 ಗಂಟೆಗೆ ಹಾನಗಲ್ಲಿನಲ್ಲಿ ಪಂಜಿನ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. ಮಂಗಳವಾರ ಸಂಜೆ 6 ಗಂಟೆಗೆ ಇಲ್ಲಿನ ಕನಕದಾಸ ವೃತ್ತದಿಂದ ಆರಂಭವಾಗುವ ಪಂಜಿನ ಮೆರವಣಿಗೆ ತಡಸ- ಗೊಂದಿ ಮಾರ್ಗವಾಗಿ ಕಿತ್ತೂರು ಚನ್ನಮ್ಮ ರಸ್ತೆಯ ಮೂಲಕ ತಾರಕೇಶ್ವರ ದೇವಸ್ಥಾನ ತಲುಪುವುದು. ಅಲ್ಲಿಯೇ ಸಭೆ ನಡೆಸಲಾಗುವುದು ಎಂದು ಬಿಜೆಪಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ವಿನಯ ಬಂಕನಾಳ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

