ಹಾವೇರಿ

ಕೋಳಿ ಸಾಕಾಣಿಕೆ ತರಬೇತಿ ಶಿಬಿರ

Published On :

ಹಾವೇರಿ: ಬಾಗಲಕೋಟೆ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಲ್ಲಿ ಕೋಳಿ ಸಾಕಾಣಿಕೆ ಬಗ್ಗೆ ಮೂರು ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಶಿಬಿರದಲ್ಲಿ ಕೋಳಿ ಸಾಕಾಣಿಕೆಯಲ್ಲಿ ಅಧಿಕ ಉತ್ಪಾದನೆಗೆ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಸಂಸ್ಕರಣಾ ಕ್ರಮಗಳು, ಹಣಕಾಸಿನ ನಿರ್ವಹಣೆ ಕುರಿತು ತರಬೇತಿ  ನೀಡಲಾಗುವುದು. ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುವುದು. ಆಸಕ್ತ ರೈತರು, ರೈತ ಮಹಿಳೆಯರು, ಸ್ವ ಸಹಾಯ ಸಂಘದ ಸದಸ್ಯರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಇತ್ಯಾದಿ ವಿವರಗಳಿರುವ ಅರ್ಜಿಯನ್ನು ನ. 16ರೊಳಗಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರಸ್ತೆ, ಬಾಗಲಕೋಟೆ- ಇವರಿಗೆ ಸಲ್ಲಿಸಬೇಕು. ಮಾಹಿತಿಗೆ ದೂ. 08354-244028, 244048 ಹಾಗೂ ಮೊ. 9164446886 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.