ದುರ್ದೈವ: ಎಚ್ಕೆ ವಿಷಾದ
ಹಾವೇರಿ: ಹಾಯಾಗಿ ನಿದ್ದೆ ಮಾಡುತ್ತ ಹೋಗುತ್ತಿದ್ದ ವೇಳೆ ಬಸ್ ದುರಂತ ಸಂಭವಿಸಿ ಗುರುತು ಸಿಗದಂತೆ 7 ಜನರು ಸುಟ್ಟು ಕರಕಲಾಗಿರುವ ಘಟನೆ ದುರ್ದೈವದ ಸಂಗತಿ. ಇಂಥ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬಸ್ ದುರಂತದ ಸ್ಥಳಕ್ಕೆ ಭೇಟಿ ನೀಡಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಘಟನೆ ಮನಸ್ಸಿಗೆ ನೋವು ತಂದಿದೆ. ಮೃತರ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ದೇವರು ನೀಡಲಿ. ಇಂಥ ಸಂದರ್ಭದಲ್ಲೂ ಯುವಕನೊಬ್ಬ ಮೆರೆದ ಸಾಹಸ ಮೆಚ್ಚುವಂಥದ್ದು. ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಿದರೂ ಇಂಥ ಘಟನೆ ನಡೆಯುತ್ತಿರುವುದು ನೋವಿನ ಸಂಗತಿ. ಪ್ರಯಾಣಿಕರ ಸುರಕ್ಷತೆಗೆ ಮಹತ್ವ ನೀಡಲು ಸರ್ಕಾರ ಚಿಂತನೆ ನಡೆಸಲಿದೆ ಎಂದು ಎಚ್.ಕೆ. ಪಾಟೀಲ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

