ಮೋದಿ ರ್ಯಾಲಿಗೆ 10 ಸಾವಿರ ಕಾರ್ಯಕರ್ತರು
ಹಾವೇರಿ: ಬೆಂಗಳೂರಿನಲ್ಲಿ ನ. 17ರಂದು ನಡೆಯುವ ನರೇಂದ್ರ ಮೋದಿಯವರ 'ಭಾರತ ಗೆಲ್ಲಿಸಿ' ರ್ಯಾಲಿಗೆ ಜಿಲ್ಲೆಯಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ತೆರಳುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಭೋಜರಾಜ ಕರೂದಿ ತಿಳಿಸಿದರು.
ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 5 ಕೂಪನ್‌ಗಳಿರುವ 2 ಸಾವಿರ ಪುಸ್ತಕಗಳು ನೋಂದಣಿಯಾಗಿವೆ. ಸ್ವಂತ ಖರ್ಚಿನಲ್ಲಿ 60ಕ್ಕೂ ಹೆಚ್ಚು ಬಸ್, ಖಾಸಗಿ ವಾಹನ ಮಾಡಿಕೊಂಡು ಶನಿವಾರ ಸಂಜೆ ಜಿಲ್ಲೆಯಿಂದ ಬೆಂಗಳೂರಿಗೆ ತೆರಳಲಾಗುತ್ತಿದೆ. ಇನ್ನಷ್ಟು ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ರ್ಯಾಲಿಗೆ ಪಕ್ಷಾತೀತವಾಗಿ ಭರ್ಜರಿ ಸ್ಪಂದನೆ ದೊರೆಯುತ್ತಿದೆ. ಲೋಕಸಭಾ ಚುನಾವಣೆಗೆ ಬೂತ್ ಮಟ್ಟದಲ್ಲಿ ಸಂಘಟನಾತ್ಮಕ ತಯಾರಿಗೆ ರ್ಯಾಲಿಯ ಪ್ರಯೋಜನ ಪಡೆಯಲಾಗುವುದು ಎಂದರು.
ಸಿಎಂ ಕ್ರಮಕ್ಕೆ ಆಕ್ರೋಶ: ಮುಖ್ಯಮಂತ್ರಿಗಳು ಒಗ್ಗಟ್ಟಾದ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ವರ್ಗಗಳ ನಡುವೆ ತಾರತಮ್ಯ ಹುಟ್ಟಿಸುವ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿರುವ ಧೋರಣೆಗೆ ಕರೂದಿ ಆಕ್ರೋಶ ವ್ಯಕ್ತಪಡಿಸಿದರು. ಶಾಲೆಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾತ್ರ ಪ್ರವಾಸ ಭಾಗ್ಯ ಒದಗಿಸುವ ಯೋಜನೆ ತರಲು ಹೊರಟಿದ್ದು ಖಂಡನೀಯ. ಮಕ್ಕಳ ಮಧ್ಯೆ ಜಾತೀಯತೆಯ ರಾಜಕಾರಣ ಮಾಡಬಾರದು. ಮಕ್ಕಳಲ್ಲಿ ಕೀಳರಿಮೆ, ಜಾತೀಯತೆ ಬೀಜ ಬಿತ್ತುವ ಬದಲು ಎಲ್ಲರಿಗೂ ಯೋಜನೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ವಕ್ತಾರ ಪ್ರಭು ಹಿಟ್ನಳ್ಳಿ, ತಾಲೂಕು ಅಧ್ಯಕ್ಷ ಮಲ್ಲೇಶಪ್ಪ ಹರಿಜನ, ನಗರ ಘಟಕದ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ಶಿವಲಿಂಗಪ್ಪ ಕಲ್ಯಾಣಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರದೀಪ ಮುಳ್ಳೂರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

