27ರಿಂದ ಮಹಿಳಾ ಪೈಕಾ ಕ್ರೀಡಾಕೂಟ
ಹಾವೇರಿ: ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯ, ಪೈಕಾ ನಿರ್ದೇಶನಾಲಯ ನವದೆಹಲಿ, ಭಾರತ ಕ್ರೀಡಾ ಪ್ರಾಧಿಕಾರ ಪಾಟಿಯಾಲ, ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ಪ್ರಸಕ್ತ ಸಾಲಿನ 39ನೇ ರಾಷ್ಟ್ರ ಮಟ್ಟದ ಮಹಿಳಾ ಪೈಕಾ ಕ್ರೀಡಾಕೂಟ ಗುಂಪು-4ರ ಖೋಖೋ, ಕಬಡ್ಡಿ, ವಾಲಿಬಾಲ್ ಪಂದ್ಯಗಳು ನ. 27ರಿಂದ 30ರ ವರೆಗೆ ನಗರದ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಹೊನಲು ಬೆಳಕಿನಲ್ಲಿ ಜರುಗಲಿವೆ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕ್ರೀಡಾಕೂಟದ ಯಶಸ್ಸಿಗಾಗಿ 15 ಸಮಿತಿ ರಚಿಸಲಾಗಿದೆ. ಲೋಪ ನಡೆಯದಂತೆ ಮುಂಜಾಗ್ರತೆ ವಹಿಸಬೇಕೆಂದು ಸೂಚಿಸಿದರು.
ಕ್ರೀಡಾಕೂಟಕ್ಕೆ ಆಗಮಿಸುವ 16ರಿಂದ 25ರ ವಯೋವಾನದ 1 ಸಾವಿರ ಮಹಿಳಾ ಕ್ರೀಡಾಪಟುಗಳು ಹಾಗೂ 200 ವ್ಯವಸ್ಥಾಪಕರಿಗೆ ಸೂಕ್ತ ವಸತಿ, ಊಟೋಪಚಾರದ ವ್ಯವಸ್ಥೆ ಕಲ್ಪಿಸಬೇಕು. ಮಹಿಳಾ ಕ್ರೀಡಾಪಟುಗಳಿಗೆ ಯೋಗ್ಯ ವಸತಿ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಬಡ್ಡಿ ತರಬೇತುದಾರ, ಪೈಕಾ ಮಾಸ್ಟರ್ ಮೊಹ್ಮದ್ ಇಸ್ಮಾಯಿಲ್ ಕ್ರೀಡಾಕೂಟ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಹೊರಪೇಟೆ ಇದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಪಂದ್ಯಾವಳಿ ಸಮಿತಿ ಸದಸ್ಯ ಕಾರ್ಯದರ್ಶಿ ವೆ. ಮುತ್ತುಕಾಮಾಚ್ಚಿ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

