ಇಂದು ಗ್ರಂಥಾಲಯ ಸಪ್ತಾಹ ಸಮಾರೋಪ
ಬ್ಯಾಡಗಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭ ನ. 19ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ನೆಹರೂ ನಗರದಲ್ಲಿರುವ ಗ್ರಂಥಾಲಯದಲ್ಲಿ ನಡೆಯಲಿದೆ. ಶಾಸಕ ಬಸವರಾಜ ಶಿವಣ್ಣನವರ ಕಾರ್ಯಕ್ರಮ, ಸಾಹಿತಿ ಸಂಕಮ್ಮ ಸಂಕಣ್ಣನವರ ಪುಸ್ತಕ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೇಂದ್ರದ ಮುಖ್ಯ ಗ್ರಂಥಾಲಯಾಧಿಕಾರಿ ಬಿ.ಕೆ. ಹೊಸಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಡಾ ಎನ್.ಎನ್. ಅರಬಗೊಂಡ, ಬಿಇಎಂಎಸ್ ಪದವಿ ಕಾಲೇಜು ಉಪನ್ಯಾಸಕ ಡಾ ಪ್ರೇಮಾನಂದ ಲಕ್ಕಣ್ಣನವರ, ಕಸಾಪ ತಾಲೂಕು ಅಧ್ಯಕ್ಷ ಮಾಲತೇಶ ಅರಳೀಮಟ್ಟಿ, ಪುರಸಭೆ ಸದಸ್ಯ ಬಸವರಾಜ ಹಂಜಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಸವಂತಪ್ಪ ಹುಲ್ಲತ್ತಿ ಉಪಸ್ಥಿತರಿರುವುದಾಗಿ ಸ್ಥಳೀಯ ಗ್ರಂಥಾಲಯಾಧಿಕಾರಿ ಬಡಪ್ಪನವರ ತಿಳಿಸಿದ್ದಾರೆ.
ಇಂದು ತೆರಿಗೆ ಕಾಯ್ದೆ ದಿನ
ಬ್ಯಾಡಗಿ: ಪಟ್ಟಣದ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನ. 19ರಂದು ಬೆಳಗ್ಗೆ 11 ಗಂಟೆಗೆ ಸಹಕಾರಿ ಸಪ್ತಾಹದ ಅಂಗವಾಗಿ ಸಹಕಾರಿ ಸಂಬಂಧ ತೆರಿಗೆ ಮತ್ತು ಕಾಯಿದೆ ದಿನ ಕಾರ್ಯಕ್ರಮ ನಡೆಯಲಿದೆ. ತಾಲೂಕಿನ ಎಲ್ಲ ಕೃಷಿಯೇತರ ಪತ್ತಿನ ಸಹಕಾರಿ ಸಂಘ ಮತ್ತು ಬ್ಯಾಂಕುಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಶಾಸಕ ಬಸವರಾಜ ಶಿವಣ್ಣನವರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಸ್.ಆರ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆಸಿಸಿ ಬ್ಯಾಂಕ್ ನಿರ್ದೇಶಕ ಶಿವಪ್ಪ ಮರಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಮಾಜಿ ಶಾಸಕ ಸುರೇಶಗೌಡ ಪಾಟೀಲ, ಎಪಿಎಂಸಿ ನಿರ್ದೇಶಕ ಎಸ್.ಸಿ. ಶಿಡೇನೂರ, ತಾಪಂ ಅಧ್ಯಕ್ಷೆ ಚಿನ್ನಮ್ಮ ಫಾಸಿ, ಎಪಿಎಂಸಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ಕೆಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸಿ.ಕೆ. ಶೆಟ್ಟರ, ತಿರಕನಗೌಡ ಪಾಟೀಲ, ಮುರಿಗೆಪ್ಪ ಶೆಟ್ಟರ, ವಿವೇಕಾನಂದ ಬೆಟಗೇರಿ, ಸುರೇಶ ಯತ್ನಳ್ಳಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇಂದಿನಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹ
ಹಾವೇರಿ: ರಾಜ್ಯಾದ್ಯಂತ ನ. 19ರಿಂದ 25ರ ವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸಲು ಸರ್ಕಾರ ನಿರ್ಧರಿಸಿದ್ದು, ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಏಕತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷಗಳನ್ನು ತಡೆಗಟ್ಟವುದಕ್ಕಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಜಿಲ್ಲೆಯಲ್ಲೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸಪ್ತಾಹದ ಅಂಗವಾಗಿ ನ. 19ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಜರುಗಲಿದ್ದು, ಎಲ್ಲ ಅಧಿಕಾರಿಗಳು ತಪ್ಪದೇ ಹಾಜರಿರಬೇಕು. ಸಪ್ತಾಹದ ಅಂಗವಾಗಿ ವಾರವಿಡಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

