ಇಂದು ಸ್ವಚ್ಛತಾ ಉತ್ಸವ
ಹಾವೇರಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಿರ್ಮಲ ಭಾರತ್ ಅಭಿಯಾನ, ಜಿಪಂ, ತಾಪಂ ಹಾಗೂ ಅಗಡಿ ಗ್ರಾಪಂ ಆಶ್ರಯದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಮತ್ತು ಸ್ವಚ್ಛತಾ ಉತ್ಸವ ಉದ್ಘಾಟನಾ ಕಾರ್ಯಕ್ರಮ ನ. 19ರಂದು ಬೆಳಗ್ಗೆ 10,30ಕ್ಕೆ ಅಗಡಿ ಗ್ರಾಮದ ಪ್ಯಾಟಿ ಬಸವೇಶ್ವರ ಕಲಾ ಭವನದಲ್ಲಿ ಜರುಗಲಿದೆ. ಸಣ್ಣ ಕೈಗಾರಿಕೆ, ಮುಜರಾಯಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಉದ್ಘಾಟಿಸುವರು. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ಶಿವಕುಮಾರ ಉದಾಸಿ, ಪ್ರಹ್ಲಾದ ಜೋಶಿ, ಶಾಸಕರಾದ ಕೆ.ಬಿ. ಕೋಳಿವಾಡ, ಮನೋಹರ ತಹಶೀಲ್ದಾರ, ಬಸವರಾಜ ಶಿವಣ್ಣನವರ, ಬಸವರಾಜ ಬೊಮ್ಮಾಯಿ, ಯು.ಬಿ. ಬಣಕಾರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಉಪಾಧ್ಯಕ್ಷೆ ಶೋಭಾ ನಿಸೀಮಗೌಡ್ರ, ತಾಪಂ ಅಧ್ಯಕ್ಷೆ ರಿಹಾನಾ ಚಾಂದಶೇಖ, ಉಪಾಧ್ಯಕ್ಷ ಪ್ರಕಾಶ ಬಣಕಾರ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಎಸ್ಪಿ ಎನ್. ಶಶಿಕುಮಾರ, ಜಿಪಂ ಸದಸ್ಯೆ ಸಾವಿತ್ರವ್ವ ರಾಮನಗೌಡ್ರ, ಅಗಡಿ ಗ್ರಾಪಂ ಅಧ್ಯಕ್ಷ ಪುಟ್ಟಯ್ಯ ಮಾಗೋಡ, ಉಪಾಧ್ಯಕ್ಷೆ ಜೈತುನಬಿ ಘಾಡಜಿ ಮುಂತಾದವರು ಪಾಲ್ಗೊಳ್ಳುವರೆಂದು ಜಿಪಂ ಸಿಇಒ ಕೆ.ಬಿ. ಆಂಜನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನಕ ಜಯಂತಿ: ಸೂಚನೆ
ಹಾವೇರಿ: ಕನಕದಾಸರ ಜಯಂತಿ ಅಂಗವಾಗಿ ನ. 20ರಂದು ಬೆಳಗ್ಗೆ 11 ಗಂಟೆಗೆ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಕನಕದಾಸರ ಭಾವಚಿತ್ರದ ಮೆರವಣಿಗೆ ಹೊರಡಲಿದೆ. ಮಧ್ಯಾಹ್ನ 2 ಗಂಟೆಗೆ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು. ವಿವಿಧ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಗೈರು ಹಾಜರಾಗುವುದನ್ನು ಗಮನಿಸಲಾಗಿದ್ದು, ಈ ಬಾರಿ ಗೈರು ಹಾಜರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ತಿಳಿಸಿದ್ದಾರೆ.
21ರಂದು ಹಾನಗಲ್ಲ ತಾಪಂ ಕೆಡಿಪಿ ಸಭೆ
ಹಾವೇರಿ: ಹಾನಗಲ್ಲ ತಾಲೂಕು ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನ. 21ರಂದು ಬೆಳಗ್ಗೆ 11.30ಕ್ಕೆ ಸಾಮರ್ಥ್ಯ ಸೌಧದಲ್ಲಿ ಶಾಸಕ ಮನೋಹರ ತಹಶೀಲ್ದಾರ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಪ್ರತಿಭಟನೆ
ಹಾವೇರಿ: ಹೊಸ ಜಾಹೀರಾತು ನೀತಿ ಜಿಲ್ಲಾ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದೆ. ಇದನ್ನು ರದ್ದುಪಡಿಸಿ, ಪರಿಷ್ಕರಿಸಿದ ಹೊಸ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ನ. 19ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಸಂಘದ ಅಧ್ಯಕ್ಷ ನಿಂಗಪ್ಪ ಚಾವಡಿ, ಪ್ರಧಾನ ಕಾರ್ಯದರ್ಶಿ ಪರಶುರಾಮ ಅಗಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

