ಮಕ್ಕಳನ್ನು ದುಡಿಸಿದರೆ ಶಿಕ್ಷೆ: ನ್ಯಾ. ಬಾಳಪ್ಪ ಜರಗು
ರಾಣಿಬೆನ್ನೂರು: 16 ವರ್ಷದೊಳಗಿನ ಎಲ್ಲ ಮಕ್ಕಳು ಉಚಿತವಾಗಿ ಶಿಕ್ಷಣ ಪಡೆಯುವ ಹಕ್ಕು ಹೊಂದಿದ್ದು, ಅವರನ್ನು ಬಾಲ ಕಾರ್ಮಿಕರಾಗಿ ದುಡಿಸುವುದು ಶಿಕ್ಷಾರ್ಹ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ದಿವಾಣಿ ನ್ಯಾಯಾಧೀಶ ಬಾಳಪ್ಪ ಜರಗು ತಿಳಿಸಿದರು. ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಾರುತಿ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಉಚಿತ ಕಾನೂನು ಅರಿವು ನೆರವು ಶಿಬಿರ ಉದ್ಘಾಟಿಸಿ, ಪಾಲಕರು ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು. ಅದರ ಬದಲು ಕೆಲಸಕ್ಕೆ ಕಳುಹಿಸುವುದು ಅಪರಾಧ. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಹಾಗೂ ದುಡಿಯಲು ಕಳಿಸಿದ ವ್ಯಕ್ತಿಗಳು ಶಿಕ್ಷಾರ್ಹರು ಎಂದರು. ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಎಚ್. ಅಂಕದ ಮಾತನಾಡಿ, ದೇವರ ಸಮಾನರಾದ ಮಕ್ಕಳನ್ನು ಕೈಗಾರಿಕೆ, ಮಂಡಕ್ಕಿ ಭಟ್ಟಿ, ಗ್ಯಾರೆಜು ಮುಂತಾದೆಡೆ ಕೆಲಸಕ್ಕೆ ಕಳುಹಿಸುವ ಬದಲು ಶಿಕ್ಷಣ ಕೊಡಿಸಲು ಮುಂದಾಗಬೇಕೆಂದು ತಿಳಿಸಿದರು. ನ್ಯಾಯವಾದಿ ಕೆ.ಡಿ. ಮಡಿವಾಳರ ಮಕ್ಕಳ ಹಕ್ಕುಗಳ ಕುರಿತು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಲಕ್ಷ್ಮಣ, ಮಕ್ಕಳ ಶಿಕ್ಷಣ ಹಾಗೂ ಬಾಲಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ವಿವರಿಸಿದರು. ಸರ್ಕಾರಿ ಪ್ರೌಢಶಾಲೆಯ ಪ್ರಧಾನಗುರು ಕೆ.ವಿ. ಗೊಲ್ಲರ ಪ್ರಾಸ್ತಾವಿಕ ಮಾತನಾಡಿದರು. ಎಸ್.ಬಿ. ಅಡರಕಟ್ಟಿ, ಆರ್.ಬಿ. ಚಲವಾದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

