ಹಾವೇರಿ

ಅಕ್ರಮ ಮರಳು ಸಾಗಾಟ: 8 ಟ್ರ್ಯಾಕ್ಟರ್ ವಶ

Published On :

ಹಾವೇರಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 8 ಟ್ರ್ಯಾಕ್ಟರ್‌ಗಳನ್ನು ತಹಸೀಲ್ದಾರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಟ್ರ್ಯಾಕ್ಟರ್‌ಗಳನ್ನು ನಗರ ಠಾಣೆ ಸುಪರ್ದಿಯಲ್ಲಿ ಇಡಲಾಗಿದ್ದು, ಗುರುವಾರ ಅದನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ವಶಕ್ಕೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಗಣಿ ಇಲಾಖೆ ಅಧಿಕಾರಿಗಳು ಮರಳು ಸಾಗಣೆ ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸಲಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.