ಅಧ್ಯಯನ ಹವ್ಯಾಸ ಬೆಳೆಸಿಕೊಳ್ಳಿ: ಮಠದ
ಹಿರೇಕೆರೂರು: ಗ್ರಂಥಾಲಯಗಳಲ್ಲಿರುವ ವಿವಿಧ ಪುಸ್ತಕಗಳ ಅಧ್ಯಯನದ ಮೂಲಕ ಮನಸ್ಸನ್ನು ಸದೃಢವಾಗಿಸಲು ಸಾಧ್ಯವಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಂಥಗಳ ಅಧ್ಯಯನ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹಾವೇರಿ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಜಿ.ಎಂ. ಮಠದ ಕರೆ ನೀಡಿದರು. ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಜರುಗಿದ ಗ್ರಂಥಾಲಯ ಸಪ್ತಾಹದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಪನ್ಯಾಸ ನೀಡಿದರು. ಗ್ರಂಥಾಲಯಗಳು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಹಾಗೂ ಇತ್ತೀಚೆಗೆ ರಚನೆ ಮಾಡಿದ ಎಲ್ಲ ಸಾಹಿತಿಗಳ ಪುಸ್ತಕಗಳ ಸಂಗ್ರಹವಾಗಿರುತ್ತದೆ. ದೈನಂದಿನ ಪತ್ರಿಕೆಗಳು, ವಾರಪತ್ರಿಕೆಗಳನ್ನು ಹಾಗೂ ಉದ್ಯೋಗ ಮಾರ್ಗದರ್ಶಿ, ಸಾಮಾನ್ಯ ಜ್ಞಾನದ ಬಹು ಉಪಯೋಗಿ ಪುಸ್ತಕ ಲಭ್ಯವಿರುತ್ತವೆ. ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆ ಗ್ರಂಥಾಲಯದ ಪುಸ್ತಕಗಳ ಅಧ್ಯಯನ ಮಾಡುವ ಮೂಲಕ ಜ್ಞಾನ ವೃದ್ದಿಸಿಕೊಳ್ಳಬೇಕೆಂದರು. ಬಿ.ಕೆ. ಹೊಸಳ್ಳಿ, ಧರಣಿಂಧ್ರಕುಮಾರ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

