ಕನಕದಾಸರ ವಿಚಾರಧಾರೆ ರಾಷ್ಟ್ರ ಮಟ್ಟಕ್ಕೆ ತಲುಪಲಿ: ಬೊಮ್ಮಾಯಿ
ಶಿಗ್ಗಾಂವಿ: ದಾಸರ ಜನ್ಮ ಭೂಮಿಯಲ್ಲಿ ನಾವೆಲ್ಲರೂ ಬದುಕಿ ಬಾಳುತ್ತಿರುವುದು ನಮ್ಮೆಲ್ಲರ ಏಳು ಜನ್ಮದ ಪುಣ್ಯ. ನಾಡಿನಲ್ಲಿ ಹುಟ್ಟಿರುವಂತಹ ಕನಕದಾಸರ ವಿಚಾರಧಾರೆಗಳನ್ನು ರಾಷ್ಟ್ರ ಮಟ್ಟಕ್ಕೆ ಮುಟ್ಟಿಸುವ ಪ್ರಯತ್ನ ಜರುಗಬೇಕಿದೆ ಎಂದು ಶಿಗ್ಗಾಂವಿ-ಸವಣೂರ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕಿನ ಬಾಡ ಗ್ರಾಮದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ತಾಲೂಕು ಕನಕ ಸೇವಾ ಸಮಿತಿ ಆಶ್ರಯದಲ್ಲಿ ಜರುಗಿದ ಕನಕದಾಸರ 526ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.
ಬಾಡದ ಅರಮನೆ ವೀಕ್ಷಿಸಲು ಬರುವಂತ ಪ್ರವಾಸಿಗರಿಗೆ ದಾಸರ ತತ್ವಾದರ್ಶಗಳನ್ನು ತಿಳಿಯಲು ಡಿಜಿಟಲ್ ಲೈಬ್ರರಿ ಮತ್ತು ಬಾಡ-ಕಾಗಿನೆಲೆ ಕ್ಷೇತ್ರದ ಅಭಿವೃದ್ಧಿಗೆ ರು. 13 ಕೋಟಿ ಕ್ರಿಯಾಯೋಜನೆ ಸಿದ್ದಪಡಿಸಲಾಗಿದೆ. ಆ ಕೆಲಸ ಬೇಗನೆ ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.
ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದವರು.
ಶಿಗ್ಗಾವಿ ಎಸ್ಆರ್ಜೆವಿ ಕಾಲೇಜಿನ ಉಪನ್ಯಾಸಕ ಶಿವಪ್ರಕಾಶ ಬಳಿಗಾರ ಹಾಗೂ ರಾಮು ಮೂಲಗಿ ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷೆ ಸುಜಾತಾ ಕಲಕಟ್ಟಿ, ಉಪವಿಭಾಗಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ತಹಸೀಲ್ದಾರ್ ಎಸ್.ಎ. ಚೌಗಲೆ, ಕಾಗಿನೆಲೆ ಪ್ರಧಿಕಾರದ ಆಯುಕ್ತ ಮಲ್ಲೇಶಪ್ಪ ಹೊರಪೇಟಿ, ಜಿಪಂ ಸದಸ್ಯರಾದ ಶಶಿಧರ ಹೊನ್ನಣ್ಣವರ, ಬಿ.ಟಿ. ಇನಾಮತಿ, ಸಿ.ಎಸ್. ಪಾಟೀಲ್, ಸರೋಜಮ್ಮ ಆಡಿನ ಇತರರು ಇದ್ದರು.
ಶಿಕ್ಷಣ ಸಂಯೋಜಕ ಆರ್.ಎಸ್.ದುಂದೂರ ಸ್ವಾಗತಿಸಿದರು. ಸಂತಬಾ ನಿರೂಪಿಸಿ, ವಂದಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

