ಖಾತ್ರಿಯಡಿ ಶೌಚಾಲಯ ನಿರ್ಮಾಣದಲ್ಲಿ ಸಾಧನೆ
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ನ. 20
ನಿರ್ಮಲ ಭಾರತ ಅಭಿಯಾನ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ, ಶೌಚಾಲಯವನ್ನು ನಿರ್ಮಿಸಿಕೊಳ್ಳುವುದಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದರ ಫಲವಾಗಿ ಬಿಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 4 ಗ್ರಾಮಗಳಲ್ಲಿ 2012-13ನೇ ಸಾಲಿನಲ್ಲಿ 491 ಶೌಚಾಲಯವನ್ನು ನಿರ್ಮಿಸಲಾಗಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್. ಎಂ. ಮಾರೇರ ತಿಳಿಸಿದರು.
ಬಯಲು ಬಹಿರ್ದೆಸೆ ಮುಕ್ತ ಗ್ರಾಮವನ್ನಾಗಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಹಾಗೂ ಗ್ರಾಮಾಂತರ ಪ್ರದೇಶದ ಸಾರ್ವಜನಿಕರು, ಶೌಚಾಲಯವನ್ನು ನಿರ್ಮಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿಸಿರುವ ಅನುದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ತಾಲೂಕಿನ ಬಿಲ್ಲಹಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದಕ್ಕಾಗಿ ಸಾರ್ವಜನಿಕರಿಗೆ ಬರಬಹುದಾದ ಹಲವಾರು ರೋಗಗಳ ನಿಯಂತ್ರಣಕ್ಕಾಗಿ ಶೌಚಾಲಯವನ್ನು ನಿರ್ಮಿಸಿಕೊಳ್ಳುವುದಕ್ಕಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಈ ಹಿಂದೆ ನೀಡುತ್ತಿದ್ದ ಮೊತ್ತಕ್ಕಿಂತ ಹೆಚ್ಚಿಗೆಯಾಗಿ ಹಣವನ್ನು ನೀಡಲು ಮುಂದಾಗಿದೆ. ಸಾರ್ವಜನಿಕರು ಸರ್ಕಾರದ ಸೌಲಭ್ಯ ಪಡೆದು ಮನೆಗೊಂದು ಶೌಚಾಲಯವನ್ನು ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಲಿತವ್ವ ವೆಂಕಪ್ಪ ಬೋವಿ ಕಾರ್ಯಕ್ರಮ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯವೆಂದು ತಿಳಿಸಿದರು. ಗ್ರಾಪಂ ಸದಸ್ಯರಾದ ಮಲ್ಲನಗೌಡ ಪೊಲೀಸಗೌಡ್ರ, ಯಶೋದಾ ಅಂಗಡಿ, ಶಂಕ್ರವ್ವ ಹಳ್ಳಳ್ಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

