ಚಿತ್ರಕಲೆ ಮನೋವಿಕಾಸಕ್ಕೆ ಸಹಕಾರಿ
ಹಾವೇರಿ: ಚಿತ್ರಕಲೆಯು ಮಕ್ಕಳ ಮನೋವಿಕಾಸಕ್ಕೆ ಸಹಕಾರಿಯಾಗಿದೆ. ಪಾಲಕರು ಹಾಗೂ ಶಿಕ್ಷಕರು ಮಕ್ಕಳು ಚಿತ್ರಕಲೆಯಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಹಾಗೂ ಪ್ರಾಚ್ಯವಸ್ತು ಇಲಾಖೆ ಆಶ್ರಯದಲ್ಲಿ ರಾಜ್ಯೋತ್ಸವದ ಅಂಗವಾಗಿ ಗುರುವಾರ ಪುರಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಚಿತ್ರಕಲೆಯೂ ಜಾಗತಿಕ ಭಾಷೆಯಾಗಿದ್ದು, ಆದರೂ ಜನಮಾನಸದಿಂದ ದೂರ ಸರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕರು ಸೇರಿಕೊಂಡು ಮಕ್ಕಳಲ್ಲಿ ಚಿತ್ರಕಲೆ ಬಗ್ಗೆ ಆಸಕ್ತಿ ಮೂಡಿಸಲು ಶಿಬಿರವನ್ನು ಆಯೋಜಿಸಿದ್ದಾರೆ. ಅಲ್ಲದೆ, ಇಡೀ ಜಿಲ್ಲೆಯ ಮಕ್ಕಳನ್ನು ಒಂದೆಡೆ ಸೇರಿಸಿರುವ ಕಾರ್ಯ ಶ್ಲಾಘನೀಯ ಎಂದರು.
ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಏಳು ತಾಲೂಕುಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಗಮಿಸಿದ್ದರು. ಅವರಿಗೆ ಶಿಲ್ಪಕಲಾ ವೈಭವ, ಐತಿಹಾಸಿಕ ಸ್ಥಳಗಳು, ಹಳ್ಳಿಯ ದೃಶ್ಯ, ಜಾನಪದ ದೃಶ್ಯ ಎನ್ನುವ ವಿಷಯ ನೀಡಲಾಗಿತ್ತು.
ಸುಮಾರು ಮೂರು ಗಂಟೆಗಳ ಕಾಲ ನಡೆದ ಚಿತ್ರಕಲಾ ಶಿಬಿರದಲ್ಲಿ ಬಹುತೇಕ ವಿದ್ಯಾರ್ಥಿಗಳು ಹಳ್ಳಿಯ ಜನ ಜೀವನ ಪರಿಚಯಿಸುವ ಹತ್ತು ಹಲವು ದೃಶ್ಯಗಳನ್ನು ಕಣ್ಣಿಗೆ ಕಟ್ಟುವಂತೆ ಹಾಗೂ ರಾಜ್ಯದ ನಾನಾ ಭಾಗದಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಒಂದೇ ಕಡೆಗೆ ಜೋಡಿಸಿಟ್ಟಂತೆ ಚಿತ್ರಿಸಿದ್ದರು.
-----
27ರಂದು ಮೂಢನಂಬಿಕೆ ಕುರಿತು ಚರ್ಚೆ
ರಾಣಿಬೆನ್ನೂರು: ನಗರದ ಹಲಗೇರಿ ರಸ್ತೆಯಲ್ಲಿರುವ ಎನ್.ಆರ್. ಸಂಕೇತ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಮೂಢನಂಬಿಕೆ ಪ್ರತಿರೋಧಕ ಕಾನೂನು ಬೇಕೇ? ಬೇಡವೇ ಎಂಬ ವಿಷಯದ ಕುರಿತು ಚರ್ಚಿಸಲು ನ. 29ರಂದು ಬೆಳಗ್ಗೆ 11ಕ್ಕೆ ತಾಲೂಕಿನ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರತಿಯೊಂದು ಪ್ರೌಢ ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಪರ ಮತ್ತು ವಿರೂಧವಾಗಿ ಚರ್ಚಿಸಲು ಉಚಿತ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೆ ರು. 1000 ನಗದು, ಉಳಿದವರಿಗೆ ಸಮಾಧಾನಕರ ಬಹುಮಾನ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ನ. 27ರ ಒಳಗಾಗಿ ಹೆಸರು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ 9916243442ಗೆ ಸಂಪರ್ಕಿಸಬಹುದು.
ಆಟೋ ಪಲ್ಟಿ: ಮೂವರಿಗೆ ಗಾಯ
ಹಾವೇರಿ: ಆಟೋ ಪಲ್ಟಿಯಾಗಿ ಮೂವರು ತೀವ್ರಗಾಯಗೊಂಡ ಘಟನೆ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಸಮೀಪ ಗುರುವಾರ ಬೆಳಗ್ಗೆ ಸಂಭವಿಸಿದೆ. ಕರ್ಜಗಿ ಗ್ರಾಮದಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಹಾವೇರಿಗೆ ಆಗಮಿಸುತ್ತಿದ್ದ ಟಂಟಂ ಯತ್ತಿನಹಳ್ಳಿ ಬಳಿ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ 14 ಪ್ರಯಾಣಿಕರ ಪೈಕಿ ಚಿಕ್ಕಮುಗದೂರು ಗ್ರಾಮದ ಬಸವರಾಜ ಅಗಸಿನಮನಿ, ಲಕ್ಷ್ಮವ್ವ ಅಗಸಿನಮನಿ ಹಾಗೂ 2 ವರ್ಷದ ದಾನೇಶ್ವರಿ ತೀವ್ರಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

